ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಂಧ್ರಪ್ರದೇಶ ಮತ್ತು ಒಡಿಶಾ ಲೋಕಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದೆ. ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ ಆಂಧ್ರಕ್ಕೆ ಮರಳಲು ಸಜ್ಜಾಗಿದೆ. ಒಡಿಶಾದಲ್ಲಿ ಬಿಜೆಪಿ ಸರಳ ಬಹುಮತವನ್ನು ಗೆದ್ದು ಮುನ್ನಡೆದಿದೆ.
ಆಂಧ್ರಪ್ರದೇಶದಲ್ಲಿ ಸಿಎಂ ಜಗನ್ ಮೋಹನ್ ರೆಡ್ಡಿ ನೇತೃತ್ವದಲ್ಲಿ ಆಡಳಿತಾರೂಢ ವೈಎಸ್‌ಆರ್‌ಸಿಪಿ ಪತನ ಕಂಡಿದೆ. ರಾಜ್ಯದಲ್ಲಿ ಟಿಡಿಪಿ 131, ಜೆಎನ್‌ಪಿ 20, ವೈಎಸ್‌ಆರ್‌ಸಿಪಿ 17 ಮತ್ತು ಬಿಜೆಪಿ 7 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ.
ಆಂಧ್ರದಲ್ಲಿ ಗೆಲುವು ಹತ್ತಿರವಾಗುತ್ತಿದ್ದಂತೆ ಚಂದ್ರಬಾಬು ನಾಯ್ಡು ಸರ್ಕಾರ ರಚಿಸಲು ಸಜ್ಜಾಗುತ್ತಿದ್ದಾರೆ.