ಚುನಾವಣೆ 7-8 ತಿಂಗಳು ಇದೆ, ನೋಡೋಣ ಬನ್ನಿ ನಾನು ಬದುಕಿದ್ದೀನಿ: ಮಾಜಿ ಪ್ರಧಾನಿ ದೇವೇಗೌಡ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಲೋಕಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಈಗಾಗಲೇ ರಣತಂತ್ರ ರೂಪಿಸುತ್ತಿದ್ದು, ಇತ್ತ ಅವಧಿ ಪೂರ್ವ ಲೋಕಸಭಾ ಚುನಾವಣೆ ನಡೆಸಲು ಬಿಜೆಪಿ ಪ್ಲಾನ್ ಮಾಡಿದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದರು. ಇದೀಗ INDIA ಒಕ್ಕೂಟದ ಬಗ್ಗೆ ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂಡಿ ಒಕ್ಕೂಟದ ನಾಯಕರು ದಿನಕ್ಕೊಂದು ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಬಾಂಬೆಯಲ್ಲಿ 28 ಗುಂಪಿನ ಒಂದು ದೊಡ್ಡ ಮಹಾಸಭೆ ನಡಿತು. ಸೆ.30 ರೊಳಗೆ ಎಲ್ಲಾ ಸೀಟ್ ನಿಗದಿ ಮಾಡ್ತಿವಿ ಅಂತ ಹೇಳಿದ್ದರು, ಈಗ ಏನಾಗಿದೆ. ಮೈತ್ರಿಕೂಟದಲ್ಲಿ ಒಂದು ಕಮಿಟಿ ಮಾಡಿದ್ದಾರೆ. ಅದರೆ, ಈ ಒಕ್ಕೂಟಕ್ಕೆ ಯಾರು ನಾಯಕರು ಎಂಬುದರ ಬಗ್ಗೆ ಮಾಹಿತಿಯೇ ಇಲ್ಲ. ಈವರೆಗೂ ಪ್ರಧಾನಮಂತ್ರಿ ಅಭ್ಯರ್ಥಿ ಯಾರೆಂದು ಹೆಸರು ಹೇಳಿದ್ದಾರಾ? ಅಥವಾ ಆ ಒಕ್ಕೂಟದ ಸಂಚಾಲಕರು ಯಾರು ಅಂತ ಹೇಳಿದ್ದಾರಾ? ಎಂದು ಪ್ರಶ್ನೆ ಮಾಡಿದರು.

ಎರಡು ದಿನ ಬೊಂಬಾಯ್ ಮೀಟಿಂಗ್ ನಡೀತು. ಇನ್ನೂ ಚುನಾವಣೆ 7-8 ತಿಂಗಳು ಇದೆ. ನೋಡೋಣ ಬನ್ನಿ ನಾನು ಬದುಕಿದ್ದೀನಿ ಎಂದು ಇಂಡಿ ಒಕ್ಕೂಟದ ಅಸಮಾಧಾನ ಹೊರ ಹಾಕಿದರು.

ಇಂಡಿ ಒಕ್ಕೂಟದಲ್ಲಿ ಕೆಲ ಸ್ನೇಹಿತರಿದ್ದಾರೆ. ಕುಮಾರಸ್ವಾಮಿ ಮುಖ್ಯಮಂತ್ರಿ ಪದಗ್ರಹಣಕ್ಕೆ ಹಲವಾರು ನಾಯಕರು ಬಂದರು. ಆದರೆ ಈಗ ಸರ್ಕಾರ ಬೇರೆ, ಈಗಿನ ಸರ್ಕಾರದ ಉದ್ದೇಶವು ಅವರಿಗೆ ಗೊತ್ತಿದೆ. ಆದ್ದರಿಂದ ಇದರ ಉದ್ದೇಶದ ಬಗ್ಗೆ ಹೆಚ್ಚು ಹೇಳಬೇಕಿಲ್ಲ. ನಾನು ಕರ್ನಾಟಕ ಬಿಟ್ಟು ಹೊರಗೆ ಹೋಗಿಲ್ಲ. ಮಾಧ್ಯಮದ ಸುದ್ದಿಗಳನ್ನ ನೋಡಿದ್ರೆ, ಮೂರು ಬಾರಿ ಇಂಡಿಯಾದವರು ಮೀಟಿಂಗ್ ಮಾಡಿದ್ದಾರೆ. ಪ್ರಧಾನಮಂತ್ರಿ ‌ಅಭ್ಯರ್ಥಿ ಘೋಷಣೆ ಇರಲಿ, 28 ಪಾರ್ಟಿಗಳು ಸೇರಿ ಮೋದಿ, ಬಿಜೆಪಿಗೆ ಸೆಡ್ಡು ಹೊಡೆಯಲು ಹೊರಟಿದ್ದಾರೆ. ಸೆಪ್ಟೆಂಬರ್ ಒಳಗೆ ಒನ್ ಟು ಒನ್ ಕ್ಯಾಂಡಿಡೇಟ್‌ ಮಾಡುತ್ತೇವೆ ಎಂದಿದ್ದರು. ಈವರೆಗೆ ಏನೂ ಸುಳಿವಿಲ್ಲ. ಇನ್ನು ರಾಜ್ಯದಲ್ಲಿ ಬಿಜೆಪಿ ವಿಪಕ್ಷ ನಾಯಕನನ್ನು ಆಯ್ಕೆ ಮಾಡಿಲ್ಲ. ನಾನು ಯಾರನ್ನೂ ಟೀಕಿಸಲು ಮಾತನಾಡೊಲ್ಲ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!