ಚುನಾವಣೆ ಮುಕ್ತಾಯ: ನೀತಿ ಸಂಹಿತೆ ಹಿಂಪಡೆದ ಆಯೋಗ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮಾರ್ಚ್ 29ರಿಂದ ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಹೇರಲಾಗಿದ್ದ ನೀತಿ ಸಂಹಿತೆಯನ್ನು ಮೇ.10ರಂದು ಮತದಾನ, ಮೇ.13ಕ್ಕೆ ಫಲಿತಾಂಶ ಘೋಷಣೆ ಬೆನ್ನಲ್ಲೇ, ಇಂದು ಕೇಂದ್ರ ಚುನಾವಣಾ ಆಯೋಗ ಹಿಂಪಡೆದಿದೆ.

ಈ ಕುರಿತಂತೆ ಆದೇಶ ಹೊರಡಿಸಿರುವ ಕೇಂದ್ರ ಚುನಾವಣಾ ಆಯೋಗದ ಸೆಕ್ರೇಟರಿ ಅಶ್ವಿನ್ ಕುಮಾರ್ ಅವರು, ವಿಧಾನಸಭಾ ಚುನಾವಣೆ ಘೋಷಣೆಯ ನಂತ್ರ ಮಾದರಿ ನೀತಿ ಸಂಹಿತೆಯ ನಿಬಂಧನೆಗಳನ್ನು ಜಾರಿಗೆ ತರಲಾಗಿತ್ತು. ಚುನಾವಣಾ ಆಯೋಗವು ಚುನಾವಣಾ ವೇಳಾಪಟ್ಟಿಯನ್ನು ಘೋಷಿಸಿದ ದಿನಾಂಕದಿಂದ ಮತ್ತು ಅದು ಚುನಾವಣಾ ಪ್ರಕ್ರಿಯೆ ಮುಗಿಯುವವರೆಗೂ ಇದು ಜಾರಿಯಲ್ಲಿರುತ್ತದೆ ಎಂದಿದ್ದಾರೆ.

ರಾಜ್ಯ ಚುನಾವಣೆಗೆ ಸಂಬಂಧಿಸಿದ ಫಲಿತಾಂಶಗಳು ಕರ್ನಾಟಕ 2023 ಮತ್ತು ರಾಜ್ಯಗಳ ಸಂಸದೀಯ, ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಮೇಘಾಲಯ, ಒಡಿಶಾ, ಪಂಜಾಬ್ ಮತ್ತು ಉತ್ತರ ಪ್ರದೇಶಗಳನ್ನು ಆಯಾ ರಿಟರ್ನಿಂಗ್ ಗಳು ಘೋಷಿಸಿವೆ. ಈ ಹಿನ್ನಲೆಯಲ್ಲಿ ಮಾದರಿ ನೀತಿ ಸಂಹಿತೆಯು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!