ಹೊಸ ದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಿಧಾನ ಸಭಾ ಚುನಾವಣೆಯ ರಂಗೇರಿದೆ. ಫೆ 5 ರಂದುಮತದಾನ ನಡೆಯಲಿದ್ದು, ಸರ್ವ ಪಕ್ಷಗಳು ಚುನಾವಣೆಗೆ ಸಿದ್ಧವಾಗಿದೆ.
70 ವಿಧಾನಸಭಾ ಸ್ಥಾನಗಳಿಗೆ ಒಟ್ಟು 699 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದು, ಫೆಬ್ರವರಿ 8 ರಂದು ಮತ ಎಣಿಕೆ ನಡೆಯಲಿದೆ.
ಪ್ರಸುತ್ತ ಅಧಿಕಾರದಲ್ಲಿರುವ ಆಮ್ ಆದ್ಮಿ ಪಕ್ಷ ಮತ್ತೊಮ್ಮೆ ಗದ್ದುಗೆಗೆ ಏರಲು ಸಜ್ಜಾಗಿದ್ದರೆ, ಆಪ್ ಪಕ್ಷವನ್ನು ಅಧಿಕಾರದಿಂದ ಇಳಿಸಲು ಬಿಜೆಪಿಯನ್ನು ಬಿಜೆಪಿ ತಯಾರಿ ನಡೆಸುತ್ತಿದೆ.
ಕಳೆದ ವರ್ಷ ಅಬಕಾರಿ ಹಗರಣದಲ್ಲಿ ಜೈಲು ಸೇರಿದ್ದ ಕೇಜ್ರಿವಾಲ್ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ರಾಜಿನಾಮೆ ಬಳಿಕ ಇದು ಅವರ ಮೊದಲ ಚುನಾವಣೆ ಆಗಿದೆ. ಕೇಜ್ರಿವಾಲ್ ತಮ್ಮ ಭದ್ರಕೋಟೆಯಾದ ನವದೆಹಲಿಯಲ್ಲಿ ಸತತ ನಾಲ್ಕನೇ ಗೆಲುವಿನತ್ತ ಕಣ್ಣಿಟ್ಟಿದ್ದಾರೆ. ಬಿಜೆಪಿಯಿಂದ ಬಿಜೆಪಿಯ ಪರ್ವೇಶ್ ಸಿಂಗ್ ವರ್ಮಾ ಹಾಗೂ ಕಾಂಗ್ರೆಸ್‌ನಿಂದ ಸಂದೀಪ್ ದೀಕ್ಷಿತ್ ಅವರು ಸ್ಪರ್ಧಿಸಲಿದ್ದಾರೆ.
ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಜಂಗ್‌ಪುರದಿಂದ ಸ್ಪರ್ಧಿಸಲಿದ್ದಾರೆ. ಈ ಕ್ಷೇತ್ರದಲ್ಲಿ ಹಿಂದೆ 2015 ಮತ್ತು 2020ರಲ್ಲಿ ಆಪ್‌ನ ಪ್ರವೀಣ್ ಕುಮಾರ್ ಗೆದ್ದಿದ್ದರು.
ದೆಹಲಿ ಮುಖ್ಯಮಂತ್ರಿ ಅತಿಶಿ ಕಲ್ಕಾಜಿ ಕ್ಷೇತ್ರದಿಂದ ಸರ್ಧೆ ಮಾಡುತ್ತಿದ್ದು, ಬಿಜೆಪಿಯಿಂದ ಮಾಜಿ ಸಂಸದ ರಮೇಶ್ ಬಿಧುರಿ ಅವರು ಸ್ಪರ್ಧೆ ಮಾಡಲಿದ್ದಾರೆ. ಕಾಂಗ್ರೆಸ್‌ನ ನಾಯಕಿ ಅಲ್ಕಾ ಲಾಂಬಾ ಕೂಡ ಸ್ಪರ್ಧೆಯಲ್ಲಿದ್ದು, ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.
ಈ ನಡುವೆ ಚುನಾವಣೆಯನ್ನು ನ್ಯಾಯಸಮತವಾಗಿ ನಡೆಸಲು ಚುನಾವಣಾ ಆಯೋಗ ಸಕಲ ರೀತಿಯಲ್ಲಿ ತಯಾರಿ ನಡೆಸಿದೆ. 3 ಸಾವಿರ ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು ಎಲ್ಲವೂ ಸೂಕ್ಷ್ಮ ಎಂದು ಗುರುತಿಸಲಾಗಿದೆ. ಆದ್ದರಿಂದ ಚುನಾವಣಾ ಭದ್ರತೆಗೆ ಹೆಚ್ಚಿನ ಗಮನ ನೀಡಲಾಗಿದೆ. 150 ಪ್ಯಾರಾ ಮಿಲಿಟರಿ ಪಡೆಗಳನ್ನು ಭದ್ರತೆಗಾಗಿ ನಿಯೋಜನೆ ಮಾಡಲಾಗಿದೆ. ಅಲ್ಲದೇ ದೆಹಲಿಯ ತುಂಬಾ 30,000 ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.