ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ಈಗ ನಾಲ್ಕನೇ ವಾರಕ್ಕೆ ಕಾಲಿಟ್ಟಿದ್ದು, ಜಗತ್ತೇ ಆತಂಕದಲ್ಲಿದೆ. ಈ ಯುದ್ಧದ ಬಿಸಿ ಭಾರತದ ಮೇಲಾಗದಂತೆ ತಡೆಯಲು ಪ್ರಧಾನಿ ನರೇಂದ್ರ ಮೋದಿ ಅವರು ಸನ್ನದ್ಧರಾಗಿದ್ದಾರೆ. ದೇಶದ ಮುಂದಿನ ಯೋಜನೆ ಮತ್ತು ಸಿದ್ಧತೆಗಳ ಬಗ್ಗೆ ಚರ್ಚಿಸಲು ಮಾರ್ಚ್ 27 (ನಾಳೆ) ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ಸಂವಾದ ನಡೆಸಲಿದ್ದಾರೆ.
ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಮತ್ತು ಪುದುಚೇರಿ ಸಿಎಂಗಳ ಬದಲು ಆಯಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳ ಜೊತೆ ಪ್ರತ್ಯೇಕ ಸಭೆ ನಡೆಯಲಿದೆ.
ಯುದ್ಧದಿಂದಾಗಿ ಹಾರ್ಮುಜ್ ಜಲಸಂಧಿಯಲ್ಲಿ ಹಡಗುಗಳ ಸಂಚಾರ ಕಷ್ಟವಾಗಿದೆ. ಭಾರತಕ್ಕೆ ತೈಲ ಮತ್ತು ಅನಿಲ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ನೋಡಿಕೊಳ್ಳಲು ಸರ್ಕಾರ ಸರ್ವಪ್ರಯತ್ನ ನಡೆಸುತ್ತಿದೆ ಎಂದು ಪ್ರಧಾನಿ ಸಂಸತ್ತಿನಲ್ಲಿ ಭರವಸೆ ನೀಡಿದ್ದಾರೆ.
ಸಂಘರ್ಷಕ್ಕಿಂತ ಸಂವಾದ ಮತ್ತು ರಾಜತಾಂತ್ರಿಕತೆಯೇ ಶ್ರೇಷ್ಠ ಎಂಬ ಭಾರತದ ನಿಲುವನ್ನು ಮೋದಿ ಅವರು ಗಲ್ಫ್ ರಾಷ್ಟ್ರಗಳ ನಾಯಕರ ಮುಂದೆ ಪುನರುಚ್ಚರಿಸಿದ್ದಾರೆ.
ಕೇರಳ, ಅಸ್ಸಾಂ, ಪುದುಚೇರಿಯಲ್ಲಿ ಏಪ್ರಿಲ್ 9 ರಂದು ಹಾಗೂ ತಮಿಳುನಾಡಿನಲ್ಲಿ ಏಪ್ರಿಲ್ 23 ರಂದು ಮತದಾನ ನಡೆಯಲಿದೆ. ಬಂಗಾಳದಲ್ಲಿ ಎರಡು ಹಂತಗಳಲ್ಲಿ (ಏಪ್ರಿಲ್ 23, 29) ಮತದಾನ ನಡೆದು, ಮೇ 4 ರಂದು ಫಲಿತಾಂಶ ಹೊರಬೀಳಲಿದೆ.



