ಹೊಸದಿಗಂತ ಡಿಜಿಟಲ್ ಡೆಸ್ಕ್ :
ಲೋಕಸಭಾ ಚುನಾವಣೆ ಮತ್ತು ಕೆಲವು ರಾಜ್ಯಗಳಲ್ಲಿ ನಡೆದ ವಿಧಾನಸಬಾ ಚುನಾವಣೆ ಮುಕ್ತಾಯವಾಗಿದ್ದು, ಈ ಹಿನ್ನೆಲೆ ಮಾರ್ಚ್ 16 ರಂದು ಜಾರಿಗೆ ತರಲಾಗಿದ್ದ ಮಾದರಿ ನೀತಿ ಸಂಹಿತೆಯನ್ನು ಇಂದು ತೆರವುಗೊಳಿಸಲಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ.
ಲೋಕಸಭಾ ಚುನಾವಣೆ ಮತ್ತು ಅರುಣಾಚಲ ಪ್ರದೇಶ, ಸಿಕ್ಕಿಂ, ಒಡಿಶಾ, ಆಂಧ್ರ ಪ್ರದೇಶ ರಾಜ್ಯಗಳಿಗೆ ಇದೇ ವೇಳೆ ನಡೆದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿದೆ.ಹೀಗಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಮಾದರಿ ನೀತಿ ಸಂಹಿತೆಯನ್ನು ಅಂತ್ಯಗೊಳಿಸಲಾಗಿದೆ ಎಂದು ಚುನಾವಣಾ ಆಯೋಗವು ಕೇಂದ್ರ ಸಂಪುಟ ಕಾರ್ಯದರ್ಶಿ ಮತ್ತು ರಾಜ್ಯ ಮುಖ್ಯ ಕಾರ್ಯದರ್ಶಿಗಳಿಗೆ ತಿಳಿಸಿದೆ.