ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚುನಾವಣೆಯನ್ನು ಕೋರ್ಟ್ ನಿರ್ದೇಶನದ ಪ್ರಕಾರ ನಡೆಯಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಜಿಬಿಎ ಚುನಾವಣೆ ನಡೆಸಲು ಸರಕಾರ ಸಿದ್ಧವಾಗಿದ್ದು,ಕೋರ್ಟ್ ಸೂಚಿಸಿದಂತೆ ನಡೆಸುತ್ತೇವೆ ಎಂದರು.
ಬಳಿಕ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರ ಮಾತನಾಡಿದ ಅವರು,ಪ್ರಶ್ನೆ ಪತ್ರಿಕೆ ಸೋರಿಕೆ ದೇಶಕ್ಕೆ ದೊಡ್ಡ ಅಪಮಾನ. ಈ ಕುರಿತು ಕೇಂದ್ರ ಸಚಿವರು ಹಾಗೂ ಸಂಸದರು ಉತ್ತರಿಸಬೇಕು ಎಂದು ಆಗ್ರಹಿಸಿದರು.



