ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಒಟ್ಟಾಗಿ ಸ್ಪರ್ಧಿಸುವುದರಿಂದ ಸೀಟು ಹಂಚಿಕೆ ವಿಚಾರವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಎಚ್.ಡಿ.ಕುಮಾರಸ್ವಾಮಿ ಚರ್ಚಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಮೂರು ಕ್ಷೇತ್ರಗಳಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದು ಈಗ ಖಚಿತವಾಗಿದೆ. ನಿನ್ನೆ ರಾತ್ರಿ ನಡೆದ ಸಭೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ನಡುವೆ ಕ್ಷೇತ್ರಗಳ ಹಂಚಿಕೆ ಅಂತಿಮಗೊಂಡಿದೆ ಎನ್ನಲಾಗಿದೆ.
ನಿನ್ನೆ ಸಂಜೆ ನಡೆದ ಸಭೆಯಲ್ಲಿ ಕೋಲಾರ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಡಲು ತೀರ್ಮಾನಿಸಲಾಗಿದೆ. ಮೂವರು ಅಭ್ಯರ್ಥಿಗಳನ್ನು ಕುಮಾರಸ್ವಾಮಿ ಅವರೇ ಘೋಷಿಸುವಂತೆ ಅಮಿತ್ ಶಾ ಸಲಹೆ ನೀಡಿದ್ದಾರೆ. ಹಾಸನ, ಮಂಡ್ಯ ಜೊತೆಗೆ ಕೋಲಾರ ಕೂಡ ಜೆಡಿಎಸ್ ಗೆ ನೀಡಲಾಗಿದೆ. ಇನ್ನೆರಡು ದಿನಗಳಲ್ಲಿ ಅಭ್ಯರ್ಥಿಗಳ ಹೆಸರನ್ನು ಅಧಿಕೃತವಾಗಿ ಪ್ರಕಟಿಸಲಾಗುವುದು ಎಂದು ಸಭೆಯಲ್ಲಿ ತೀರ್ಮಾನಿಸಲಾಗಿದೆ.
ವರದಿಗಳ ಪ್ರಕಾರ, ಮಂಡ್ಯ ಕ್ಷೇತ್ರದಿಂದ ಎಚ್.ಡಿ.ಕುಮಾರಸ್ವಾಮಿ ಅವರು ಸ್ಪರ್ದಿಸುವಂತೆ ಅಮಿತ್ ಶಾ ಸಲಹೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.