ಚುನಾವಣಾ ಜಿದ್ದಾಜಿದ್ದಿ: ರಾಯಣ್ಣ ಬ್ರಿಗೇಡ್​ ಆರಂಭಿಸಲು ಮತ್ತೆ ಮುಂದಾದ ಕೆಎಸ್​ ಈಶ್ವರಪ್ಪ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹಿಂದುಳಿದವರಿಗೆ, ನ್ಯಾಯ ಸಿಗಬೇಕು ಅಂತ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಪ್ರಾರಂಭಿಸಿದ್ದೆ. ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ನಿಲ್ಲಿಸಬೇಕು ಅಂತ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಮತ್ತು ಕೇಂದ್ರ ಸಚಿವ ಅಮಿತ್ ಶಾ ಹೇಳಿದರು. ಮರು ಮಾತನಾಡದೆ ನಿಲ್ಲಿಸಿದೆ.

ಆ ಸಂಘಟನೆ ಈಗ ಇದ್ದಿದ್ದರೆ ಹಿಂದುಳಿದವರಿಗೆ ನ್ಯಾಯ ಸಿಗುತ್ತಿತ್ತೇನೋ. ನಾನು ಯಾವಾಗಲೂ ಹಿರಿಯರ ಮಾತು‌ ಮೀರಿರಲಿಲ್ಲ ಹೀಗಾಗಿ ಕೈಬಿಟ್ಟೆ. ನಾನು ಆವಾಗಲೇ ಅವರ ಮಾತು ಮೀರಿದ್ದರೆ ಸರಿ ಹೋಗುತಿತ್ತು. ಹೀಗೆ ಹೇಳುವ ಮೂಲಕ ಕೆಎಸ್​ ಈಶ್ವರಪ್ಪ ಅವರು ಮತ್ತೆ ಸಂಗೊಳ್ಳಿ ರಾಯಣ್ಣ ಬ್ರಿಗೇಡ್​ ಆರಂಭಿಸುವ ಸುಳಿವು ನೀಡಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಹಿಂದುಳಿದವರು ಮತ್ತು ದಲಿತರಿಗೆ ನ್ಯಾಯ ದೊರಕಿಸಿಕೊಡಲು ಶ್ರಮಿಸುತ್ತೇನೆ. ಬಿಜೆಪಿ ನನ್ನ ಮಾತೃ ಸಂಸ್ಥೆ. ಈ ಚುನಾವಣೆಯಲ್ಲಿ ಗೆದ್ದು ಬಿಜೆಪಿಗೆ ಮರಳುತ್ತೇನೆ. ದಿನದಿಂದ ದಿನಕ್ಕೆ ಬೆಂಬಲ ಹೆಚ್ಚುತ್ತಿದೆ. ಜನರು ಹೆಚ್ಚು ಬೆಂಬಲಿಸುತ್ತಾರೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!