Friday, August 12, 2022

Latest Posts

ವಿದ್ಯುತ್ ಚಾಲಿತ ವಾಹನಗಳು ಮುಂದಿನ ಭವಿಷ್ಯಕ್ಕೆ ಅನಿವಾರ್ಯ: ಸಚಿವ ಸುನಿಲ್ ಕುಮಾರ್

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ವಿದ್ಯುತ್ ಚಾಲಿತ ವಾಹನಗಳು ಮುಂದಿನ ಭವಿಷ್ಯಕ್ಕೆ ಅನಿವಾರ್ಯ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.
ಭವಿಷ್ಯದಲ್ಲಿ ವಿದ್ಯುತ್ ಚಾಲಿತ ವಾಹನಗಳು ಹೆಚ್ಚಾಗಿ ಇರಲಿವೆ. ಅದು ಅನಿವಾರ್ಯವೂ ಹೌದು, ಇದೇ ಕಾರಣದಿಂದ ನಾವು ವಿದ್ಯುತ್ ಚಾಲಿತ ವಾಹನಗಳಿಗೆ ಹೆಚ್ಚು ಪ್ರೋತ್ಸಾಹ ನೀಡಲಿದ್ದೇವೆ ಎಂದು ಹೇಳಿದ್ದಾರೆ.
ವಿದ್ಯುತ್ ಚಾಲಿತ ವಾಹನಗಳಿಗೆ ಪ್ರೋತ್ಸಾಹ ನೀಡಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಬೆಂಗಳೂರಿನಲ್ಲಿ 136  ಕಡೆ ವಿದ್ಯುತ್ ರೀ ಚಾರ್ಜಿಂಗ್ ಸೆಂಟರ್ ಆರಂಭವಾಗುತ್ತಿದೆ. ಮುಂದಿನ ದಿನಗಳಲ್ಲಿ 500 ಕ್ಕೂ ಹೆಚ್ಚು ಸೆಂಟರ್‌ಗಳನ್ನು ತೆರೆಯಲಾಗುತ್ತದೆ ಎಂದಿದ್ದಾರೆ.
ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲು ನಾವು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss