ಹೊಸದಿಗಂತ ವರದಿ, ರಾಣೇಬೆನ್ನೂರ:
ಕರ್ತವ್ಯ ನಿರ್ವಹಿಸುವಾಗ ವಿದ್ಯುತ್ ಪ್ರವಹಿಸಿದ ಪರಿಣಾಮ ಲೈನ್ ಮೆನ್ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ತಾಲೂಕಿನ ಹರನಗಿರಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಮೃತನನ್ನು ಹಾವೇರಿ ತಾಲೂಕಿನ ಗುತ್ತಲ ಪಟ್ಟಣದ ಚನ್ನಬಸಯ್ಯ ಗಟ್ಟಿಮಠ (36)ಎಂದು ಗುರುತಿಸಲಾಗಿದೆ.
ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟುವಂತಿತ್ತು. ಚನ್ನಬಸಯ್ಯ ಗಟ್ಟಿಮಠ ಅವರು ಗ್ರಾಮೀಣ ಭಾಗಗಳಲ್ಲಿ ರೈತರೊಡನೆ ಹಾಗೂ ಸಾರ್ವಜನಿಕರೊಡನೆ ಉತ್ತಮ ಬಾಂಧವ್ಯ ಹೊಂದಿದ್ದರು.
ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.