ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಾಸನಾಂಬೆ ದರುಶನಕ್ಕೆಂದು ಸರತಿ ಸಾಲಿನಲ್ಲಿ ನಿಂತಿದ್ದ ಜನರಿಗೆ ವಿದ್ಯುತ್ ಶಾಕ್ ತಗುಲಿದ್ದು, ಸ್ಥಳದಲ್ಲಿ ನೂಕುನುಗ್ಗಲು ಉಂಟಾಗಿದೆ. ಇದರಿಂದಾಗಿ ಹಲವರು ಗಾಯಗೊಂಡಿರುವ ಘಟನೆ ಇಂದು ನಡೆದಿದೆ.
ಸರತಿ ಸಾಲಿನಲ್ಲಿ ನಿಂತಿದ್ದ ವೇಳೆ ಕಬ್ಬಿಣದ ಬ್ಯಾರಿಕೇಡ್‌ನಲ್ಲಿ ಕರೆಂಟ್ ಹರಿದಿದೆ. ಇದರಿಂದ ಜನ ಗಾಬರಿಗೊಂಡಿದ್ದು, ನೂಕುನುಗ್ಗಾಟ ಮಾಡಿದ್ದಾರೆ. ಈ ಅವಘಡದಿಂದಾಗಿ ಹಲವರಿಗೆ ಗಾಯಗಳಾಗಿವೆ. ಕೂಡಲೇ ಗಾಯಾಳುಗಳನ್ನು ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.
ಕೆಲವು ನಿಮಿಷಗಳ ಬಳಿಕ ವಿದ್ಯುತ್ ಸಮಸ್ಯೆ ಪರಿಹರಿಸಿದ್ದು, ಮತ್ತೆ ಜನರು ಬ್ಯಾರಿಕೇಡ್ ಮೂಲಕ ದರುಶನದ ಸರದಿಯಲ್ಲಿ ನಿಂತಿದ್ದಾರೆ.