ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ವರದಿ, ಮೈಸೂರು:
ವಿದ್ಯುತ್ ಕಂಬದಲ್ಲಿ ಲೈನ್ ದುರಸ್ಥಿ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಲೈನ್ಮೆನ್ ಒಬ್ಬರು ಸಾವನ್ನಪ್ಪಿ, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಹೊಸಪುರ ಗ್ರಾಮದ ಬಳಿ ನಡೆದಿದೆ.
ಕೆಇಬಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ಕರಿನಾಯಕ ಎಂಬ ಲೈನ್ಮೆನ್ ಹೊಸಪುರದ ಬಳಿ ಕಂಬದ ಮೇಲೆ ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿದ್ದಾರೆ. ಇವರ ಸಹ ಉದ್ಯೋಗಿ ಪ್ರಶಾಂತ್ ಗಂಭೀರ ಪರಿಸ್ಥಿತಿಯಲ್ಲಿದ್ದಾರೆ. ಅಕ್ಕಪಕ್ಕದ ಗ್ರಾಮಸ್ಥರು ಆಸ್ಪತ್ರೆಗೆ ದಾಖಲು ಮಾಡಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಕರಿನಾಯಕ ಮೃತಪಟ್ಟಿದ್ದಾರೆ.
ಇವರ ಸಾವಿಗೆ ಕೆಇಬಿ ಅಧಿಕಾರಿಗಳೇ ಬೇಜವಾಬ್ದಾರಿತನವೇ ಕಾರಣ ಇವರೇ ನೇರ ಹೊಣೆಯಾಗಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.