ರೈಲ್ವೇ ನಿಲ್ದಾಣದಲ್ಲಿ ಅನಿರೀಕ್ಷಿತ ಅಪಘಾತ: ಮಾತನಾಡುವಾಗ ವಿದ್ಯುತ್ ಶಾಕ್ ಹೊಡೆದ ಘಟನೆ ವೈರಲ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕೆಲವೊಮ್ಮೆ ಅನಿರೀಕ್ಷಿತ ಅಪಘಾತಗಳು ಸಂಭವಿಸುತ್ತವೆ. ನಮ್ಮ ತಪ್ಪಿಲ್ಲದಿದ್ದರೂ ಅಪಘಾತಕ್ಕೆ ತುತ್ತಾಗುತ್ತೇವೆ. ಇಂಥದ್ದೇ ಘಟನೆಯೊಂದು ಪಶ್ಚಿಮ ಬಂಗಾಳದ ಖರಗ್‌ಪುರ ರೈಲು ನಿಲ್ದಾಣದಲ್ಲಿ ನಡೆದಿದೆ. ರೈಲ್ವೇ ಪ್ಲಾಟ್‌ಫಾರ್ಮ್‌ನಲ್ಲಿ ಮಾತನಾಡುತ್ತಾ ನಿಂತಿದ್ದ ವ್ಯಕ್ತಿಯೊಬ್ಬರಿಗೆ ವಿದ್ಯುತ್ ಸ್ಪರ್ಶಿಸಿ ಹಳಿ ಮೇಲೆ ಬಿದ್ದದ್ದಾರೆ.

ಇಬ್ಬರು ಟಿಟಿಇಗಳು ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲಿ ಮಾತನಾಡುತ್ತಿರುವಾಗ ಏಕಾಏಕಿ ಉದ್ದದ ಕರೆಂಟ್ ತಂತಿ ಬಂದು ಟಿಟಿಇ ತಲೆ ಮೇಲೆ ಬಿದ್ದಿದೆ. ಅಷ್ಟರಲ್ಲೇ ಅವರಿಗೆ ವಿದ್ಯುತ್ ಶಾಕ್ ತಗುಲಿ ರೈಲು ಹಳಿಗಳ ಮೇಲೆ ಬಿದ್ದಿದ್ದಾನೆ. ಮಾತನಾಡುತ್ತಾ ನಿಂತಿದ್ದ ಮತ್ತೊಬ್ಬ ಟಿಟಿಇ ಅಲ್ಲಿಂದ ಓಡಿ ಹೋಗಿದ್ದಾನೆ.

ವಿದ್ಯುತ್ ಸ್ಪರ್ಶದಿಂದ ಟಿಟಿಇ ಸುಟ್ಟಗಾಯಗಳಿಂದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಆ ವ್ಯಕ್ತಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಟಿಟಿಇ ಜೀವಕ್ಕೆ ಅಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!