ಹೊಸದಿಗಂತ ವರದಿ, ದಾವಣಗೆರೆ:
ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಜಿಲ್ಲೆಯ ಹರಿಹರ ಸಮೀಪದ ಡಿಜೆ ಅಮ್ಯೂಸ್ಮೆಂಟ್ ಪಾರ್ಕ್‌ನಲ್ಲಿ ಹೊಸದಾಗಿ ನಿರ್ಮಿಸಿರುವ ಕಾಟೇಜ್
ಬೆಂಕಿಗಾಹುತಿಯಾಗಿರುವ ಘಟನೆ ಸೋಮವಾರ ವರದಿಯಾಗಿದೆ.
ಕಾಟೇಜ್‌ಗೆ ಆಕಸ್ಮಿಕ ಬೆಂಕಿ ತಗುಲಿ ಒಳಗಡೆ ಇದ್ದ ಬೆಲೆಬಾಳುವ ವಸ್ತುಗಳು, ಕಟ್ಟಿಗೆ ಇತರೆ ಸಾಮಗ್ರಿಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ. ಕಟ್ಟಡದ ಮೇಲ್ಛಾವಣಿ ಹುಲ್ಲು ಹಾಸು ಆಗಿದ್ದರಿಂದ ಬೆಂಕಿ ಸುಲಭವಾಗಿ ಹಬ್ಬಿದೆ. ಘಟನೆಯಲ್ಲಿ ಸುಮಾರು 3 ಲಕ್ಷ ರೂ. ನಷ್ಟವಾಗಿರಬಹುದೆಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದರು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.