Monday, October 3, 2022

Latest Posts

ನಿರ್ಮಾಣ ಹಂತದ ಕಟ್ಟಡದಲ್ಲಿ ವಿದ್ಯುತ್ ಅವಘಡ: ಪಶ್ಚಿಮ ಬಂಗಾಳ ಮೂಲದ ಯುವಕ ಬಲಿ

ಹೊಸದಿಗಂತ ವರದಿ ಮಡಿಕೇರಿ:

ನಿರ್ಮಾಣ ಹಂತದಲ್ಲಿರುವ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಕಟ್ಟಡದಲ್ಲಿ ವಿದ್ಯುತ್ ತಗುಲಿ ಯುವಕನೊಬ್ಬ ಸಾವಿಗೀಡಾದ ಘಟನೆ ನಗರದಲ್ಲಿ ನಡೆದಿದೆ. ಮೃತನನ್ನು ಪಶ್ಚಿಮ‌ ಬಂಗಾಳ ಮೂಲದ ಹಾಸಿಂ(21) ಎಂದು ಗುರುತಿಸಲಾಗಿದೆ

ಮಡಿಕೇರಿಯ ಡೈರಿ ಫಾರಂ ಬಳಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಪೊಲೀಸ್ ವರಿಷ್ಠಾಧಿಕಾರಿಯ ಕಚೇರಿ ಕಟ್ಟಡದಲ್ಲಿ ಈ ಯುವಕ ಕೂಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದನೆನ್ನಲಾಗಿದ್ದು, ಸ್ನಾನದ ನೀರು ಬಿಸಿ ಮಾಡಲು ವಿದ್ಯುತ್ ಹೀಟರ್ ಬಳಸಿದ ಸಂದರ್ಭ ಈ ಅನಾಹುತ ಸಂಭವಿಸಿರುವುದಾಗಿ ಹೇಳಲಾಗಿದೆ.

ಯುವಕನನ್ನು ಚಿಕಿತ್ಸೆಗೆಂದು ಸ್ಥಳೀಯ ಜಿಲ್ಲಾಸ್ಪತ್ರೆಗೆ ದಾಖಲಿಸುವ ವೇಳೆಗಾಗಲೇ ಆತ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.
ಈ ಸಂಬಂಧ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!