ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಬ್ರೇಕ್ ಫೇಲ್ ಆದ ಪರಿಣಾಮ ಬೀಡಾ ಅಂಗಡಿ ಮತ್ತು ಡಾಬಾ ಗೋಡೆಗೆ ಡಿಕ್ಕಿ ಹೊಡೆದ ಘಟನೆ ನಾಗದೇವನಹಳ್ಳಿ ರಸ್ತೆಯಲ್ಲಿ ನಡೆದಿದೆ.
ಬೆಳಗ್ಗೆ 6:27ರ ಸುಮಾರಿಗೆ ಬಸ್ ಶಿರ್ಕೆ ಸರ್ಕಲ್ ನಿಂದ ನಾಗರಬಾವಿ ಕಡೆಗೆ ಹೊರಟಿತು. ಈ ವೇಳೆ ಬಸ್ ಅಪಘಾತ ಸಂಭವಿಸಿದೆ. ಅಪಘಾತದ ವೇಳೆ ರಸ್ತೆಯಲ್ಲಿ ಯಾರೂ ಇಲ್ಲದ ಕಾರಣ ಅನಾಹುತ ತಪ್ಪಿದೆ. ಅಪಘಾತದಿಂದ ಮೂವರು ಬಸ್ ಪ್ರಯಾಣಿಕರು ಕೆಲಕಾಲ ಆತಂಕಗೊಂಡಿದ್ದರು ಎನ್ನಲಾಗಿದೆ.
ಈ ಅಪಘಾತದ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ನೋಡುಗರಿಗೆ ಭಯ ಹುಟ್ಟಿಸುವಂತಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.