Wednesday, February 28, 2024

ಶಾಲಾ ಕ್ರೀಡಾಕೂಟದ ವೇಳೆ ವಿದ್ಯುತ್ ಅವಘಡ: ಓರ್ವ ಸಾವು, ಹಲವರಿಗೆ ಗಾಯ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಶಾಲಾ ಕ್ರೀಡಾಕೂಟದಲ್ಲಿ ಉಂಟಾದಂತ ಭೀಕರ ವಿದ್ಯುತ್ ಅವಘಡದಿಂದ ಓರ್ವ ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ನಡೆದಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ನಗರದ ಶಾರದಾ ಶಾಲೆಯಲ್ಲಿ ಶಾಲಾ ಕ್ರೀಢಾಕೂಟವನ್ನು ಆಯೋಜಿಸಲಾಗಿತ್ತು. ಈ ವೇಳೆಯಲ್ಲಿ ಕ್ರೀಡಾಕೂಟದ ಕಾರ್ಯಕ್ರಮಕ್ಕೆ ಹಾಕಿದ್ದ ಪೆಂಡಲ್ ಗಾಳಿಗೆ ಹಾರಿ ವಿದ್ಯುತ್ ತಂತಿಗಳಿಗೆ ಸ್ಪರ್ಶವಾಗಿದೆ. ಇದರಿಂದ ಪೆಂಡಲ್ ಕೆಳಗೆ ಇದ್ದ ಪೋಷಕರು ಹಾಗೂ ವಿದ್ಯಾರ್ಥಿಗಳಿಗೆ ವಿದ್ಯುತ್ ಪಸರಿಸಿದ್ದು, ಘಟನೆಯಲ್ಲಿ ನಾಗೇನಹಳ್ಳಿ ನಿವಾಸಿ ರಾಘವೇಂದ್ರ ಎಂಬಾತ ಕೊನೆಯುಸಿರೆಳೆದರೆ, ಹತ್ತುಕ್ಕೂ ಹೆಚ್ಚು ಮಂದಿಗೆ ಗಾಯವಾಗಿದ್ದು, ಆಸ್ಪತ್ರೆಗ ದಾಖಲು ಮಾಡಲಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!