Sunday, December 4, 2022

Latest Posts

ವಿದ್ಯುತ್ ಶಾರ್ಟ್ ಸರ್ಕ್ಯೂಟ್: ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತು ಬೆಂಕಿಗೆ ಆಹುತಿ

ಹೊಸದಿಗಂತ ವರದಿ, ಅಂಕೋಲಾ:

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾದ ಘಟನೆ ಪಟ್ಟಣದ ವಾಜಂತ್ರಿಕೇರಿ ಬಳಿ ಶುಕ್ರವಾರ ರಾತ್ರಿ ಸಂಭವಿಸಿದೆ.
ವಾಜಂತ್ರಿಕೇರಿಯ ಗೋಪಿನಾಥ ಮಹಾಲೆ ಮಾಲಿಕತ್ವದ ಮನೆಯನ್ನು ಬಾಡಿಗೆಗೆ ನೀಡಲಾಗಿತ್ತು, ಬಾಡಿಗೆದಾರರು ಮನೆಯಲ್ಲಿ ಇಲ್ಲದ ಸಂದರ್ಭದಲ್ಲಿ ಮನೆಯೊಳಗೆ ಬೆಂಕಿ ಹೊತ್ತಿ ಉರಿದು ಮನೆಯಲ್ಲಿದ್ದ ವಸ್ತುಗಳು, ಬಟ್ಟೆಗಳು, ಕಾಗದ ಪತ್ರಗಳು ಬೆಂಕಿಗೆ ಆಹುತಿಯಾಗಿದ್ದು ಮನೆಗೂ ಭಾರೀ ಪ್ರಮಾಣದಲ್ಲಿ ಹಾನಿ ಸಂಭವಿಸಿದೆ.
ಸುತ್ತ ಮುತ್ತಲಿನ ಕೆಲವು ಯುವಕರು ಮನೆಯ ಬಾಗಿಲು ಒಡೆದು ಮನೆಯೊಳಗೆ ಇದ್ದ ಗ್ಯಾಸ್ ಸಿಲೆಂಡರ್ ಗಳನ್ನು ಹೊರಗೆ ಸಾಗಿಸಿ ಸಿಲೆಂಡರ್ ಅವಘಡ ಸಂಭವಿಸುವುದನ್ನು ತಪ್ಪಿಸಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಕತ್ತಲಲ್ಲಿ ಒಂದು ಘಂಟೆಗೂ ಹೆಚ್ಚಿನ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಆರಿಸುವ ಕೆಲಸ ಮಾಡಿದ್ದು ಅಂಕೋಲಾ ಪಿ.ಎಸ್. ಐ ಮಹಾಂತೇಶ ವಾಲ್ಮೀಕಿ ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದರು.
ಹಾನಿಯ ಕುರಿತು ಹೆಚ್ಚಿನ ಮಾಹಿತಿಗಳು ಲಭ್ಯವಾಗಬೇಕಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!