ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ಸಹರಾನ್‌ಪುರ ಜಿಲ್ಲೆಯಲ್ಲಿ ಈದ್ ಹಬ್ಬದ ದಿನ ಪ್ಯಾಲೆಸ್ಟೀನ್ ಧ್ವಜ ಹಾರಿಸಿದ ಆರೋಪದ ಮೇಲೆ ವಿದ್ಯುತ್ ಇಲಾಖೆಯ ಗುತ್ತಿಗೆ ಕಾರ್ಮಿಕನನ್ನು ಸೇವೆಯಿಂದ ವಜಾಗೊಳಿಸಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
ಕೈಲಾಶ್‌ಪುರ ಪವರ್ ಹೌಸ್‌ನಲ್ಲಿ ಕೆಲಸ ಮಾಡುತ್ತಿದ್ದ ಸಾಕಿಬ್ ಖಾನ್ಮ್ ಪ್ಯಾಲೆಸ್ಟೀನ್ ಧ್ವಜ ಹಿಡಿದಿರುವ ಛಾಯಾಚಿತ್ರಗಳು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾದ ನಂತರ ಉದ್ಯೋಗಿಗೆ ವಜಾಗೊಳಿಸುವ ನೋಟಿಸ್ ನೀಡಲಾಗಿದೆ.
ಮಾರ್ಚ್ 31 ರಂದು ಈದ್ ‘ನಮಾಜ್’ ನಂತರ ಪ್ಯಾಲೆಸ್ಟೀನ್ ಧ್ವಜ ಪ್ರದರ್ಶಿಸಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.