ಸದ್ಯಕ್ಕೆ ವಿದ್ಯುತ್ ದರ ಏರಿಕೆ ಇಲ್ಲ: ಸಚಿವ ಸುನೀಲ್ ಕುಮಾರ್ ಸ್ಪಷ್ಟನೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಸದ್ಯಕ್ಕೆ ವಿದ್ಯುತ್ ದರ ಏರಿಕೆ ಇಲ್ಲ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.

ವಿದ್ಯುತ್ ದರ ಏರಿಕೆ ಸುದ್ದಿ ಕುರಿತಾಗಿ ಸ್ಪಷ್ಟನೆ ನೀಡಿರುವ ಸಚಿವರು, ರಾಜ್ಯದಲ್ಲಿ ಸದ್ಯಕ್ಕೆ ವಿದ್ಯುತ್ ದರ ಏರಿಕೆ ಪ್ರಸ್ತಾವನೆ ಇಲ್ಲ ಎಂದರು.

ವಿಧಾನ ಪರಿಷತ್ ಕಲಾಪದ ಶೂನ್ಯ ವೇಳೆಯಲ್ಲಿ ಕಾಂಗ್ರೆಸ್ ನ ವಿಧಾನಪರಿಷತ್ ಸದಸ್ಯ, ನಾಗರಾಜ್ ಯಾದವ್ ಅವರು ಪ್ರಸ್ತಾಪಿಸಿದ್ದ ವಿಷಯಕ್ಕೆ ಸಚಿವರು ಸ್ಪಷ್ಟನೆ ನೀಡಿದರು. ಬೆಲೆ ಏರಿಕೆ ನಡುವೆ ಸರ್ಕಾರ ಜನರಿಗೆ ವಿದ್ಯುತ್ ಬರೆ ಹಾಕಲು ಹೊರಟಿದೆ. ಮಾಧ್ಯಮಗಳಲ್ಲಿ ವಿದ್ಯುತ್ ದರ ಏರಿಕೆ ಅಂತ ಸುದ್ದಿ ಬಿತ್ತರವಾಗುತ್ತಿದ್ದು ಸರ್ಕಾರ ಯಾವುದೇ ಕಾರಣಕ್ಕೂ ವಿದ್ಯುತ್ ದರ ಏರಿಕೆ ಮಾಡಬಾರದು ಎಂದು ನಾಗರಾಜ್ ಯಾದವ್ ಒತ್ತಾಯ ಮಾಡಿದರು.

ಇದಕ್ಕೆ ಉತ್ತರ ನೀಡಿದ ಸಚಿವರು, ಸದ್ಯಕ್ಕೆ ರಾಜ್ಯದಲ್ಲಿ ವಿದ್ಯುತ್ ದರ ಹೆಚ್ಚಳ ಇಲ್ಲ. ಸರ್ಕಾರದ ಮುಂದೆ ವಿದ್ಯುತ್ ಬೆಲೆ ಏರಿಕೆ ಮಾಡುವ ಯಾವುದೇ ಪ್ರಸ್ತಾಪ ಇಲ್ಲ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!