ವಿದ್ಯುತ್ ದರದ ಗೊಂದಲ: ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು ನೀಡಿದ್ರು ಮಾಹಿತಿ!

ಹೊಸದಿಂಗತ ಡಿಜಿಟಲ್‌ ಡೆಸ್ಕ್:‌

ರಾಜ್ಯದಲ್ಲಿ ಒಂದೆಡೆ ಕಾಂಗ್ರೆಸ್ ಸರಕಾರ ಜನರಿಗೆ ಉಚಿತ ಉಚಿತ 200 ಯೂನಿಟ್​ ಕರೆಂಟ್​​ ನೀಡುವ ಭರವಸೆಯನ್ನು ನೀಡಿದ್ದು, ಈಗಾಗಲೇ ಜಾರಿ ಮಾಡಿದೆ.

ಇತ್ತ ವಿದುತ್ಯ್ (Electricity tariff hike) ​ಗಳು ಕಳೆದ ಬಾರಿಗಿಂತ ಹೆಚ್ಚಾಗಿ ಬಂದದ್ದನ್ನು ಕಂಡು ಜನರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.ಈ ಎಲ್ಲ ಗೊಂದಲಗಳ ಬಗೆ ಇದೀಗ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ (Mahantesh Bilagi) ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.

KERC ಮೇ 12ರಂದು ಪ್ರತಿ ಯೂನಿಟ್​​ಗೆ 70 ಪೈಸೆ ಏರಿಕೆ ಮಾಡಿದೆ. ಇದರಿಂದಾಗಿ ಬಿಲ್​​ನಲ್ಲಿ ಪರಿಷ್ಕೃತ ವಿದ್ಯುತ್ ಶುಲ್ಕವನ್ನು ನಮೂದಿಸಿದೆ. ಹೀಗಾಗಿ ಜೂನ್ ತಿಂಗಳಲ್ಲಿ ನೀಡುವ ಮೇ ತಿಂಗಳ ವಿದ್ಯುತ್ ಬಳಕೆಯ ಬಿಲ್​​ನಲ್ಲಿ ಏಪ್ರಿಲ್ ತಿಂಗಳ ಹಿಂಬಾಕಿಯನ್ನು ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಇಲ್ಲಿ KERC ಆದೇಶದ ಪ್ರಕಾರ 2 ಶ್ರೇಣಿಗಳಲ್ಲಿ ವಿದ್ಯುತ್ ಶುಲ್ಕ ಸಂಗ್ರಹ ಮಾಡಲಾಗುತ್ತಿದೆ.ಮೊದಲ 100 ಯೂನಿಟ್‌​​ಗೆ ಪ್ರತಿ ಯೂನಿಟ್‌ ದರ 4.75 ರೂ. ವಿಧಿಸಲಾಗಿದೆ. 100 ಯೂನಿಟ್ ಮೀರಿದರೆ 2ನೇ ಶ್ರೇಣಿ ದರ ಪ್ರತಿ ಯೂನಿಟ್​​ಗೆ 7 ರೂ. ಅನ್ವಯವಾಗಲಿದೆ.

ಈ ಮೊದಲು ಮೂರು ಶ್ರೇಣಿ ದರಗಳಲ್ಲಿ ಶುಲ್ಕ ಸಂಗ್ರಹಿಸಲಾಗುತ್ತಿತ್ತು. ಮೊದಲ 50 ಯೂನಿಟ್​​​ಗೆ 4.15 ರೂ., ನಂತರದ 50 ಯೂನಿಟ್​​​ಗೆ 5.6 ರೂ. 100 ಯೂನಿಟ್ ಮೀರಿದರೆ 7.15 ರೂ. ಸಂಗ್ರಹಿಸಲಾಗುತ್ತಿತ್ತು.

ಇದೀಗ ಪರಿಷ್ಕರಣೆ ಆದೇಶದಲ್ಲಿ 1ರಿಂದ 50 ಕಿ.ವ್ಯಾ ಮಂಜೂರಾತಿ ಲೋಡ್​​ಗೆ 110 ರೂ. 50 ಕಿ.ವ್ಯಾ. ಮೇಲ್ಪಟ್ಟ ವಿದ್ಯುತ್‌ ಮುಂಜೂರಾತಿ ಲೋಡ್​​ಗೆ 210 ರೂ. ಬಿಲ್ ಬರಲಿದೆ ಎಂದು ತಿಳಿಸಲಾಗಿದೆ.

ಏಪ್ರಿಲ್ ತಿಂಗಳಿನಿಂದಲೇ ಕೆಇಆರ್​ಸಿ ವಿದ್ಯುತ್ ದರ ಏರಿಕೆ ಮಾಡಿತ್ತು. ಆದರೆ ಚುನಾವಣೆ ಹಿನ್ನಲೆ ಇದಕ್ಕೆ ತಡೆ ನೀಡಿತ್ತು. ಈಗ ಹೊಸ ಸರ್ಕಾರ ಬರುತ್ತಿದ್ದಂತೆ ಏಪ್ರಿಲ್ ಮೇ ತಿಂಗಳ ಏರಿಕೆ ಮೊತ್ತವನ್ನ ಒಮ್ಮಿಂದೊಮ್ಮೆಲೇ ಸೇರಿಸಿ ಗ್ರಾಹಕರಿಗೆ ಬಿಲ್ ನೀಡಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!