ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆ ಶಾಕ್: ಪ್ರತಿ ಯುನಿಟ್‌ಗೆ ಹೆಚ್ಚಳ ಎಷ್ಟು ?

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮತದಾನ ಮಾಡಿ ಹೊಸ ಸರ್ಕಾರದ ನಿರೀಕ್ಷೆಯಲ್ಲಿದ್ದ ರಾಜ್ಯದ ಜನತೆಗೆ ದರ ಏರಿಕೆ ಶಾಕ್ ಸಿಕ್ಕಿದೆ. ಪ್ರತಿ ಯೂನಿಟ್‌ಗೆ 70 ಪೈಸೆ ದರ ಹೆಚ್ಚಳಕ್ಕೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ಒಪ್ಪಿಗೆ ನೀಡಿದೆ. ಏಪ್ರಿಲ್ 1 ರಿಂದಲೇ ಜಾರಿಗೆ ಬರುವಂತೆ ದರ ಹೆಚ್ಚಳವಾಗಲಿದೆ.

ಏಪ್ರಿಲ್ 1ರಿಂದ ಅನ್ವಯವಾಗುವಂತೆ ಪ್ರತಿ ಯುನಿಟ್‌ಗೆ 1.46 ರೂ. ಹೆಚ್ಚಳ ಮಾಡುವಂತೆ ಎಸ್ಕಾಂಗಳು ಬೇಡಿಕೆ ಇಟ್ಟಿದ್ದವು. ಆದರೆ ವಿದ್ಯುತ್ ನಿಯಂತ್ರಣ ಆಯೋಗ 70 ಪೈಸೆ ಹೆಚ್ಚಿಸಲು ಒಪ್ಪಿಗೆ ನೀಡಿದೆ. ಹೊಸ ದರ ಜಾರಿ ಹಿನ್ನಲೆಯಲ್ಲಿ ಗ್ರಾಹಕರ ಪ್ರತಿ ತಿಂಗಳ ಬಿಲ್‌ನಲ್ಲಿ 8.31 ರಷ್ಟು ಹೆಚ್ಚಳವಾಗಲಿದೆ.

ಕಲ್ಲಿದ್ದಲು ಮತ್ತು ಸಾಗಾಣಿಕ ವೆಚ್ಚ ಹೆಚ್ಚಳವಾಗಿರುವುದರಿಂದ ವಿದ್ಯುತ್ ಖರೀದಿ ಮಾಡಲು ವ್ಯಯಿಸುವ ಹಣವ ಪ್ರಮಾಣ ಶೇಕಡಾ 13 ರಷ್ಟು ಹೆಚ್ಚಾಗಿದೆ ಎಂದು ಆಯೋಗ ತಿಳಿಸಿದೆ. ನೌಕರರ ವೇತನ ಮತ್ತು ವಿವಿಧ ಭತ್ಯೆಗಳನ್ನು ಶೇಕಡಾ 20 ರಷ್ಟು ಹೆಚ್ಚಿಸಿರುವುದು ಕೂಡ ಆರ್ಥಿಕ ಹೊರೆ ಹೆಚ್ಚಳಕ್ಕೆ ಕಾರಣವಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!