ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರ ಮನೆಗೆ ದೀಪಾವಳಿಯ ಅಲಂಕಾರಕ್ಕಾಗಿ ಅಕ್ರಮವಾಗಿ ವಿದ್ಯುತ್ ಬಳಕೆ ಮಾಡಲಾಗಿದೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ.
ಈ ಬೆನ್ನಲ್ಲೇ ಬೆಂಗಳೂರಿನ ಜೆಡಿಎಸ್ ಕಚೇರಿ ಕಾಂಪೌಂಡ್ ಮೇಲೆ ವಿದ್ಯುತ್ ಕಳ್ಳ ಕುಮಾರಸ್ವಾಮಿ, ಕುಮಾರಸ್ವಾಮಿಯವರೇ 200 ಯುನಿಟ್ ವಿದ್ಯುತ್ ಉಚಿತವಾಗಿದೆ ನೆನಪಿಟ್ಟುಕೊಳ್ಳಿ ಹೆಚ್ಚು ಕದಿಯಬೇಡಿ ಎನ್ನುವ ಪೋಸ್ಟರ್‌ಗಳನ್ನು ಅಂಟಿಸಲಾಗಿದೆ.