September 27, 2026
Sunday, September 27, 2026
spot_img

ನಿರ್ವಹಣಾ ವೆಚ್ಚ ಏರಿಕೆ ಹಿನ್ನೆಲೆ ಇಂದಿನಿಂದ ಎಲೆಕ್ಟ್ರಾನಿಕ್‌ ಸಿಟಿ ಫ್ಲೈಓವರ್‌ ಟೋಲ್‌ ದರ ಹೆಚ್ಚಳ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಇಂದಿನಿಂದ ನೈಸ್‌ ರಸ್ತೆ, ಎಲೆಕ್ಟ್ರಾನಿಕ್ಸ್‌ ಸಿಟಿ ಫ್ಲೈ ಓವರ್‌ನ ಟೋಲ್‌ ದರ ಏರಿಕೆಯಾಗಲಿದೆ.

ನಿರ್ವಹಣಾ ವೆಚ್ಚ ಸೇರಿದಂತೆ ಇನ್ನಿತರ ದರ ಏರಿಕೆ ಹಿನ್ನೆಲೆಯಲ್ಲಿ ಟೋಲ್‌ ದರ ಕೂಡ ಏರಿಕೆ ಮಾಡಲಾಗಿದೆ. ಹೊಸೂರು ರಸ್ತೆಯಿಂದ ಬನ್ನೇರುಘಟ್ಟ ರಸ್ತೆಗೆ ಸಂಚರಿಸುವ ಕಾರುಗಳ ಟೋಲ್ ಶುಲ್ಕವನ್ನು 65 ರೂ.ನಿಂದ 72 ರೂ.ಗೆ ಹೆಚ್ಚಿಸಲಾಗಿದೆ. ಮೈಸೂರು ರಸ್ತೆ ಮತ್ತು ಮಾಗಡಿ ರಸ್ತೆ ನಡುವೆ ಟೋಲ್ ಶುಲ್ಕವನ್ನು 70 ರೂ.ನಿಂದ 77 ರೂ.ಗೆ ಹೆಚ್ಚಿಸಲಾಗಿದೆ. ಪ್ರಯಾಣದ ದೂರವನ್ನು ಅವಲಂಬಿಸಿ, ಪ್ರತ್ಯೇಕ ವಿಭಾಗಗಳಲ್ಲಿ ಕಾರುಗಳಿಗೆ ಟೋಲ್ 3 ರಿಂದ 8 ರೂ.ಗಳಷ್ಟು ಹೆಚ್ಚಾಗಿದೆ. ಬಸ್‌ಗಳ ಟೋಲ್‌ ಕೂಡ ಹೆಚ್ಚಿಸಿರುವುದರಿಂದ, ಬಿಎಂಟಿಸಿ ಹೆಚ್ಚುವರಿ ವೆಚ್ಚವನ್ನು ಪ್ರಯಾಣಿಕರಿಗೆ ಹೊರಿಸುವ ಸಾಧ್ಯತೆ ಇದೆ.

ಹೊಸೂರು ರಸ್ತೆ-ಬನ್ನೇರುಘಟ್ಟ ರಸ್ತೆ ಟೋಲ್ 65 ರಿಂದ 72 ಕ್ಕೆ ಏರಿಕೆ ಮಾಡಲಾಗಿದೆ. ದ್ವಿಚಕ್ರ ವಾಹನ ಸವಾರರಿಗೆ ಇದೇ ಮಾರ್ಗದ ಟೋಲ್ ಶುಲ್ಕ 30 ರಿಂದ 33 ರೂ.ಗೆ ಹೆಚ್ಚಿಸಲಾಗಿದೆ. ಬನ್ನೇರುಘಟ್ಟ ರಸ್ತೆಯಿಂದ ಕನಕಪುರ ರಸ್ತೆಗೆ 15 ರಿಂದ 17 ಕ್ಕೆ ಏರಿಕೆ ಮಾಡಲಾಗಿದೆ.

Must Read