spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, October 16, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಅಂಗನವಾಡಿ ಮೇಲೆ ಕಾಡಾನೆ ದಾಳಿ: ಅರ್ಧ ಕಟ್ಟಡ ಜಖಂ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ಕೊಡಗು:

ಕಾಡಾನೆಯೊಂದು ಅಂಗನವಾಡಿಗೆ ದಾಳಿ ನಡೆಸಿ ಅರ್ಧ ಕಟ್ಟಡವನ್ನು ಜಖಂಗೊಳಿಸಿರುವ ಘಟನೆ ಮಾಲ್ದಾರೆ ಸಮೀಪದ ತಟ್ಟಳ್ಳಿ ಹಾಡಿಯಲ್ಲಿ ನಡೆದಿದೆ.
ಕಳೆದ ಮೂರು ವರ್ಷಗಳಿಂದ ಕಾಡಾನೆ ಹಾವಳಿ ತಡೆಗಟ್ಟಲು ಸಂಬಂಧ ಪಟ್ಟ ಅಧಿಕಾರಿಗಳಿಗೆ ಹಾಡಿ ನಿವಾಸಿಗಳು ಮನವಿ ಮಾಡಿದ್ದರೂ ಯಾವುದೇ ರೀತಿಯ ಪ್ರಯೋಜನವಾಗಲಿಲ್ಲ ಎಂದು ಹಾಡಿ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸ್ಥಳಕ್ಕೆ ಮಾಲ್ಡಾರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಟಿ.
ಎಸ್.ಸಮೀರ್ ಭೇಟಿ ನೀಡಿ ಪರಿಶೀಲಿಸಿ ತಕ್ಷಣವೇ ಸಂಬಂಧ ಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಲ್ಲದೆ, ಕಾಡಾನೆ ಹಾವಳಿ ತಡೆಗಟ್ಟಲು ಶಾಶ್ವತ ಪರಿಹಾರ ಕಂಡುಕೊಳ್ಳುವಂತೆ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು.
ಸಂಬಂಧಿಸಿದ ಅಧಿಕಾರಿಗಳು ಕೂಡಾ ಅಂಗನವಾಡಿಯನ್ನು ನವೀಕರಿಸುವ ಭರವಸೆ ನೀಡಿದ್ದಾರೆ.
ಈ ಸಂದರ್ಭ ಮಾಲ್ಡಾರೆ ಗ್ರಾಮ ಪಂಚಾಯಿತಿ ಸದಸ್ಯೆ ಶೋಭಾ ಮತ್ತು ಹಾಡಿ ನಿವಾಸಿಗಳು ಹಾಜರಿದ್ದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss