ಕೆಎಸ್​ಆರ್​ಟಿಸಿ ಬಸ್​ ಮೇಲೆ ಕಾಡಾನೆ ದಾಳಿ: ಪ್ರಯಾಣಿಕರು ಜಸ್ಟ್‌ ಮಿಸ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಕೆಎಸ್​ಆರ್​ಟಿಸಿ ಸ್ಲೀಪರ್​ ಕೋಚ್​ ಬಸ್​ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಸುಬ್ರಹ್ಮಣ್ಯ-ಗುಂಡ್ಯ ರಾಜ್ಯ ಹೆದ್ದಾರಿಯ ಅನಿಲ ಎಂಬಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಅದೃಷ್ಟವಶಾತ್​ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ಕೆಎಸ್​ಆರ್​ಟಿಸಿ ಬಸ್​ ಪುತ್ತೂರಿನಿಂದ ಕಾಣಿಯೂರು ಮಾರ್ಗವಾಗಿ ಸುಬ್ರಹ್ಮಣ್ಯ ಮೂಲಕ ಬೆಂಗಳೂರಿಗೆ ತೆರಳುತ್ತಿತ್ತು. ಅನಿಲ ಎಂಬಲ್ಲಿ ರಸ್ತೆ ಬದಿ ನಿಂತಿದ್ದ ಕಾಡಾನೆಯನ್ನು ಕಂಡ ಬಸ್ ಚಾಲಕ, ಆನೆಯನ್ನು ತಪ್ಪಿಸಲು ಯತ್ನಿಸಿದರು. ಆದರೂ ದಾಳಿ ಮಾಡಿದ ಕಾಡಾನೆ ಬಸ್ಸಿನ ಎಡಭಾಗಕ್ಕೆ ದಂತದಿಂದ ತಿವಿದಿದೆ. ಅದೃಷ್ಟವಶಾತ್​ ಸ್ವಲ್ಪದಲ್ಲೇ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ಚಾಲಕನ ಸಮಯ ಪ್ರಜ್ಞೆಯಿಂದ ದುರಂತವೊಂದು ತಪ್ಪಿದೆ. ಆನೆ ದಾಳಿಯಿಂದ ಬಸ್ಸಿಗೆ ಹಾನಿಯಾಗಿದೆ. ಘಟನಾ ಸ್ಥಳಕ್ಕೆ ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಬಸ್​ ಬೆಂಗಳೂರಿನತ್ತ ತೆರಳಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!