ಹೊಸದಿಗಂತ ವರದಿ, ಕೊಡಗು:
ಕಾಡಾನೆ ದಾಳಿಗೆ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ ಘಟನೆ ಸಂಭವಿಸಿದೆ.
ನೆಲ್ಯಹುದಿಕೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯ ನಲ್ವತ್ತೆಕರೆ ಗ್ರಾಮದ ಕಬೀರ್ ಮತ್ತು ಸಮೀರಾ ದಂಪತಿಯ ಪುತ್ರ ಆಶಿಕ್ (19) ಮೃತ ವಿದ್ಯಾರ್ಥಿ.
ಮತ್ತೋರ್ವ ವಿದ್ಯಾರ್ಥಿ ಅಸ್ಮಿಲ್ (19) ಎಂಬಾತನೂ ಗಾಯಗೊಂಡಿದ್ದಾರೆ.
ಅರೆಕಾಡಿನಿಂದ ನೆಲ್ಯಹುದಿಕೇರಿಗೆ ಬೈಕ್’ನಲ್ಲಿ ಬರುತ್ತಿದ್ದ ಸಂದರ್ಭ ಹಠಾತ್ತನೆ ಕಾಡನೆಯೊಂದು ಕಾಫಿ ತೋಟದಿಂದ ರಸ್ತೆಗೆ ಬಂದು ಬೈಕ್ ಸವಾರರ ಮೇಲೆ ದಾಳಿ ಮಾಡಿದೆ. ಕಾಡಾನೆ ದಾಳಿಗೆ ಆಶಿಕ್ ಎದೆಯ ಭಾಗಕ್ಕೆ ಗಂಭೀರ ಗಾಯವಾಗಿತ್ತು. ಚಿಂತಾಜನಕ ಸ್ಥಿತಿಯಲ್ಲಿದ್ದ ಆತನನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸುವ ಸಂದರ್ಭ ಸಾವನ್ನಪ್ಪಿದ್ದಾನೆ. ಅಸ್ಮಿಲ್ ಗೆ ಚಿಕ್ಕ ಪುಟ್ಟ ಗಾಯಗಳಾಗಿವೆ.