Saturday, August 13, 2022

Latest Posts

ವಿದ್ಯುತ್ ತಂತಿ ಸ್ಪರ್ಶಿಸಿ ಗಂಡಾನೆ ಸ್ಥಳದಲ್ಲೇ ಸಾವು

ಹೊಸದಿಗಂತ ವರದಿ, ರಾಮನಗರ:

ರಾಮನಗರ ತಾಲೂಕಿನ ಕೈಲಾಂಚ ಹೋಬಳಿಯ ತುಂಬೇನಹಳ್ಳಿ ಗ್ರಾಮದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಗಂಡಾನೆಯೊಂದು ಮೃತಪಟ್ಟಿದೆ.

ಸ್ಥಳೀಯ ಜಮೀನಿನ ಸಮೀಪದಲ್ಲಿದ್ದ ವಿದ್ಯುತ್ ಕಂಬದ ತಂತಿ ದಾಟಲು ಹೋದ ಆನೆಗೆ ವಿದ್ಯುತ್ ಸ್ಪರ್ಶಿಸಿದ್ದು, ಆಘಾತಕ್ಕೆ ಅದು ಸ್ಥಳದಲ್ಲೇ ಮೃತಪಟ್ಟಿದೆ.

ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಆನೆಯ ಮೃತದೇಹ ಸ್ಥಳಾಂತರಿಸಲು ವ್ಯವಸ್ಥೆ ಮಾಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss