ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಕೆಂಗೇರಿ ಸಮೀಪದ ಆರ್.ಆರ್. ವೂದ್ಯಕೀಯ ಕಾಲೇಜಿನ ಹಿಂಭಾಗದಲ್ಲಿ ಆನೆಯೊಂದು ಕಾಣಿಸಿಕೊಂಡಿದೆ. ಈ ಭಾಗದಲ್ಲಿ ವಾಕಿಂಗ್ ಹೋಗಿದ್ದ ವ್ಯಕ್ತಿಯೊಬ್ಬರ ಮೇಲೆ ಆನೆ ದಾಳಿ ನಡೆಸಿದ್ದು, ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಅಂಚೆಪಾಳ್ಯ ಗ್ರಾಮದ ನಾಗರಾಜ್ ಮೃತರ ದುರ್ದೈವಿ. ಇಂದು ಬೆಳಗಿನ ಜಾವ ಐದು ಗಂಟೆ ಸುಮಾರಿಗೆ ವಾಕಿಂಗ್ ಮಾಡುತ್ತಿದ್ದರು. ಈ ವೇಳೆ ಆನೆ ಅಟ್ಯಾಕ್ ಮಾಡಿದೆ. ಕ್ಷಣಾರ್ಧದಲ್ಲೇ ನಾಗರಾಜ್ ಮೃತಪಟ್ಟಿದ್ದಾರೆ. ಘಟನಾ ಸ್ಥಳದಲ್ಲಿ ಎರಡು ಕಾಂಪೌಂಡ್‌ಗಳು ಉರುಳಿಬಿದ್ದಿವೆ.
ಇದೆಲ್ಲವೂ ಆನೆದಾಳಿ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.



