ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಿವಮೊಗ್ಗದ ತಾವರೆಕೊಪ್ಪ ಮೃಗಾಲಯದಲ್ಲಿ ನೀರಾನೆ ದಾಳಿಯಿಂದ ಮೃತಪಟ್ಟ ಪಶುವೈದ್ಯೆಯ ಹೆಸರನ್ನು ಬೆಂಗಳೂರಿನ ಬನ್ನೇರುಘಟ್ಟದ ಆನೆಮರಿಗೆ ಇಡಲಾಗಿದೆ.
ಟ್ರೈನಿ ಪಶುವೈದ್ಯೆ ಡಾ.ಸಮೀಕ್ಷಾ ರೆಡ್ಡಿಅವರ ಹೆಸರನ್ನು ಬನ್ನೇರುಘಟ್ಟದಲ್ಲಿ ಈಚೆಗೆ ಜನಿಸಿದ ಆನೆ ಮರಿಗೆ ನಾಮಕರಣ ಮಾಡುವುದಾಗಿ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಹಾಡ್ಯ ರಂಗಸ್ವಾಮಿ ಹೇಳಿದ್ದಾರೆ.
ಇದರ ಜೊತೆಗೆ ಡಾ.ಸಮೀಕ್ಷಾ ರೆಡ್ಡಿ ಅವರಿಗೆ ಹುತಾತ್ಮ ಪಟ್ಟ ನೀಡುವ ಬಗ್ಗೆಯೂ ಸರ್ಕಾರದ ಹಂತದಲ್ಲಿ ಚರ್ಚಿಸಲಾಗುವುದು. ಡಾ.ಸಮೀಕ್ಷಾ ರೆಡ್ಡಿ ಸಾವು ತೀವ್ರ ಆಘಾತ ತಂದಿದೆ. ಇಂತಹ ಘಟನೆ ನಡೆಯಬಾರದಿತ್ತು, ನಡೆದಿದೆ. ಪೊಲೀಸ್ ಹಾಗೂ ಅರಣ್ಯ ಇಲಾಖೆ ವತಿಯಿಂದ ಘಟನೆ ಕುರಿತು ತನಿಖೆ ನಡೆಯುತ್ತಿದೆ. ವರದಿ ಬಂದ ಮೇಲೆ ಯಾರೇ ತಪ್ಪಿತಸ್ಥರಿದ್ದರೂ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ನೀರಾನೆ ಈಗಾಗಲೇ ಎರಡು ಬಾರಿ ಮರಿಯನ್ನು ಕಳೆದುಕೊಂಡಿತ್ತು. ಮೂರನೇ ಬಾರಿ ಗರ್ಭಿಣಿಯಾಗಿದ್ದು, ಮಗುವಿಗೆ ಯಾರಾದರೂ ಹಾನಿ ಮಾಡುತ್ತಾರೆ ಎಂದು ದಾಳಿ ಮಾಡಿರಬಹುದು ಎನ್ನಲಾಗಿದೆ.



