Tuesday, July 5, 2022

Latest Posts

ಆನೆ ದಂತ ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳು ಸೆರೆ

ಹೊಸದಿಗಂತ ವರದಿ, ಮಡಿಕೇರಿ
ಆನೆ‌ದಂತ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರನ್ನು ಮಡಿಕೇರಿಯ ಸಿಐಡಿ ಅರಣ್ಯ ಸಂಚಾರಿ ದಳ ಬಂಧಿಸಿದೆ. ಬಂಧಿತರನ್ನು ವುಜೈಲ್ ಅಹಮದ್, ನಯಾಜುದ್ದೀನ್ ಖಾನ್ ಹಾಗೂ ಎಂ.ಎ.ಅಶ್ರಫ್ ಎಂದು ಗುರುತಿಸಲಾಗಿದೆ.
ಗುಡ್ಡೆಹೊಸೂರು-ಹಾರಂಗಿ ರಸ್ತೆಯ ಬೆಳ್ಳೂರು ಮಾದಾಪಟ್ಟಣ ಜಂಕ್ಷನ್ ಬಳಿ ಆರೋಪಿಗಳು ಆನೆ ದಂತ ಮಾರಾಟ ಮಾಡಲು ಯತ್ನಿಸುತ್ತಿರುವುದಾಗಿ ದೊರೆತ ಖಚಿತ ಮಾಹಿತಿ ಆಧರಿಸಿ ಶುಕ್ರವಾರ ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಸಿಬ್ಬಂದಿಗಳು ದಾಳಿ ನಡೆಸಿದರು.
ಆರೋಪಿಗಳಿಂದ ಎರಡು ಆನೆ ದಂತ, ಕೃತ್ಯಕ್ಕೆ ಬಳಸಿದ ಒಂದು ದ್ವಿಚಕ್ರ ವಾಹನ ವಶಪಡಿಸಿಕೊಳ್ಳಲಾಗಿದ್ದು, ತನಿಖೆ ಮುಂದುವರಿದಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss