ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಬೆಳಗ್ಗೆ ಮಾಜಿ ಸಿಎಂ ಯಡಿಯೂರಪ್ಪ ನಿವಾಸಕ್ಕೆ ಆಗಮಿಸಿದ್ದರು. ಈ ಬಗ್ಗೆ ಬಿ.ವೈ. ವಿಜಯೇಂದ್ರ ಮಾತನಾಡಿದ್ದಾರೆ.
ಕೆಲಸದ ನಡುವೆ ನಮ್ಮ ಮನೆಗೆ ಅಮಿತ್ ಶಾ ಅವರು ಭೇಟಿ ನೀಡಿದ್ದು ಖುಷಿ ವಿಷಯ. ಉಪಹಾರದ ವೇಳೆ ಒಂದಷ್ಟು ಚರ್ಚೆ ಮಾಡಿದ್ದೇವೆ. ನನ್ನನ್ನು ಬಹಳ ಪ್ರೀತಿಯಿಂದ ಮಾತನಾಡಿಸಿದ್ದಾರೆ. ನನಗೆ ಆನೆಬಲ ಬಂದಿದೆ, ಶಿಕಾರಿಪುರದಲ್ಲಿ ಸ್ಪರ್ಧೆ ಮಾಡುತ್ತೇನೆ ಎಂದಿದ್ದಾರೆ.