ಆಸ್ಪತ್ರೆಯಲ್ಲಿ ಆನೆಗಳ ಹಾವಳಿ: ವಿಡಿಯೋ ವೈರಲ್‌ ಆದ ಬೆನ್ನಲ್ಲೇ ವ್ಯಾಪಕ ಟೀಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಇದ್ದಕ್ಕಿದ್ದಂತೆ ಎರಡು ಆನೆಗಳು ಆಸ್ಪತ್ರೆಯೊಳಕ್ಕೆ ನುಗ್ಗಿ ಅವಾಂತರ ಸೃಷ್ಟಿಮಾಡಿವೆ. ಕಿರಿದಾದ ಗೋಡೆಗಳ ನಡುವೆ ಸಲಗಗಳ ಹಾವಳಿ ಅಷ್ಟಿಷ್ಟಲ್ಲ. ಆಸ್ಪತ್ರೆಯಲ್ಲಿದ್ದ ಉಪಕರಣಗಳನ್ನು ನಾಶ ಮಾಡಿ ಇಷ್ಟಬಂದಂತೆ ಓಡಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಪಶ್ಚಿಮ ಬಂಗಾಳದ ಜಲ್ಪೈಗುರಿ ಸೇನಾ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಭಾರತೀಯ ಅರಣ್ಯ ಸೇವೆ (ಐಎಫ್‌ಎಸ್) ಅಧಿಕಾರಿ ಸುಶಾಂತ ನಂದಾ ಈ ವಿಡಿಯೋವನ್ನು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಆನೆಗಳಿಂದ ಆಸ್ಪತ್ರೆಯಲ್ಲಿ ರೋಗಿಗಳಿಗೆ ಮತ್ತು ವೈದ್ಯರಿಗೆ ಅಪಾಯ ತಪ್ಪಿದ್ದಲ್ಲ ಎಂದು ನೆಟ್ಟಿಗರು ಸಿಟ್ಟಿಗೆದ್ದಿದ್ದಾರೆ. ಆನೆಗಳು ಆಸ್ಪತ್ರೆಗೆ ಬರಲು ಕಾರಣವೇನು, ಮುಂದೆ ಇಂತಹ ಘಟನೆಗಳು ನಡೆಯದಂತೆ ಕ್ರಮಕೈಗೊಳ್ಳಬೇಕು. ಆ ಆನೆಗಳೂ ಚಿಕಿತ್ಸೆಗಾಗಿ ಆಸ್ಪತ್ರೆಗೆ ಬಂದಿವೆಯೇ? ಎಂದು ಹಲವರು ವ್ಯಂಗ್ಯ ಮಾಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಅಧಿಕಾರಿಗಳು, ಮುಂದೆ ಇಂತಹ ಘಟನೆಗಳು ನಡೆಯದಂತೆ ಮುಂಜಾಗ್ರತೆ ವಹಿಸುವುದಾಗಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!