ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, May 7, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಆಸ್ಪತ್ರೆಗಳಿಗೆ ಆಕ್ಸಿಜನ್ ಸಿಲಿಂಡರ್, ರೆಮ್ಡೆಸಿವಿರ್ ಪೂರೈಕೆ ಹೆಚ್ಚಿಸುವಂತೆ ಕೇಂದ್ರಕ್ಕೆ 11 ರಾಜ್ಯಗಳ ಮನವಿ

ಹೊಸದಿಗಂತ ಆನ್ ಲೈನ್ ಡೆಸ್ಕ್:

ದೇಶದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಇತ್ತ ಆಸ್ಪತ್ರೆಗಳಿಗೆ ಆಕ್ಸಿಜನ್ ಸಿಲಿಂಡರ್‌ಗಳು ಹಾಗೂ ರೆಮ್ಡೆಸಿವಿರ್ ಪೂರೈಕೆ ಹೆಚ್ಚಿಸುವುದು, ವೆಂಟಿಲೇಟರ್ ದಾಸ್ತಾನು ಮತ್ತು ಲಸಿಕೆ ಪ್ರಮಾಣವನ್ನು ಹೆಚ್ಚಿಸುವಂತೆ 11 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳು ಶನಿವಾರ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿವೆ.
ದೇಶದಲ್ಲಿಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರ ನೇತೃತ್ವದಲ್ಲಿ 11 ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಆರೋಗ್ಯ ಸಚಿವರ ಉನ್ನತ ಮಟ್ಟದ ಸಭೆ ನಡೆಸಲಾಯಿತು.
ಸಭೆಯಲ್ಲಿ ಭಾಗವಹಿಸಿದ್ದ 11 ರಾಜ್ಯಗಳ ಪೈಕಿ ಬಹುತೇಕ ರಾಜ್ಯಗಳು ಆಕ್ಸಿಜನ್ ಸಿಲಿಂಡರ್‌ಗಳ ಪೂರೈಕೆಯನ್ನು ಹೆಚ್ಚಿಸಬೇಕು, ಆಸ್ಪತ್ರೆಗಳಲ್ಲಿ ರೆಮ್‌ಡೆಸಿವಿರ್ ಪೂರೈಕೆಯನ್ನು ಹೆಚ್ಚಿಸಬೇಕು, ವೆಂಟಿಲೇಟರ್ ದಾಸ್ತಾನು ಮತ್ತು ಲಸಿಕೆ ಪ್ರಮಾಣವನ್ನು ಹೆಚ್ಚಿಸಬೇಕು ಎಂದು ಕೇಳಿಕೊಂಡಿರುವುದಾಗಿ ಸಭೆಯ ಬಳಿಕ ಕೇಂದ್ರ ಆರೋಗ್ಯ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.
ಸಭೆಯಲ್ಲಿ ಮಹಾರಾಷ್ಟ್ರ, ಛತ್ತೀಸ್‌ಗಢ, ರಾಜಸ್ಥಾನ, ಗುಜರಾತ್, ಮಧ್ಯಪ್ರದೇಶ, ಕೇರಳ, ಪಶ್ಚಿಮ ಬಂಗಾಳ, ದೆಹಲಿ, ಕರ್ನಾಟಕ, ತಮಿಳುನಾಡು ಮತ್ತು ಉತ್ತರ ಪ್ರದೇಶ ರಾಜ್ಯಗಳ ಆರೋಗ್ಯ ಸಚಿವರು ಭಾಗವಹಿಸಿದ್ದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

spot_imgspot_img

Don't Miss