ಟ್ವಿಟ್ಟರ್ ಪಕ್ಷಿಯ ರೆಕ್ಕೆಪುಕ್ಕ ಕತ್ತರಿಸಲು ಹೊರಟ ಎಲಾನ್ ಮಸ್ಕ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಸಾಮಾಜಿಕ ಜಾಲತಾಣದ ದೈತ್ಯ ಟೆಸ್ಲಾ ಸಿಇಒ ಎಲಾನ್ ಮಸ್ಕ್ (Elon Musk) ಟ್ವಿಟ್ಟರ್ ಅನ್ನು ತನ್ನ ತೆಕ್ಕೆಗೆ ಪಡೆದುಕೊಂಡ ಬಳಿಕಅನೇಕ ಬದಲಾವಣೆ ಮಾಡುತ್ತಾ ಬರುತ್ತಿದ್ದು, ಇದೀಗ ಬಟ್ವಿಟ್ಟರ್​ನ (Twitter) ಹೊಸ ಲೋಗೋವನ್ನು ಲಾಂಚ್ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.

ಲಾನ್ ಮಸ್ಕ್ ಟ್ವೀಟ್ ಮಾಡುವ ಮೂಲಕ ಟ್ವಿಟರ್ ಲೋಗೋವನ್ನು (Twitter Logo) ಬದಲಾಯಿಸುವ ಉದ್ದೇಶವನ್ನು ಪ್ರಕಟಿಸಿದ್ದಾರೆ.

ಶೀಘ್ರದಲ್ಲೇ ನಾವು ಟ್ವಿಟ್ಟರ್ ಬ್ರ್ಯಾಂಡ್‌ಗೆ ಮತ್ತು ಎಲ್ಲಾ ಪಕ್ಷಿಗಳಿಗೆ ವಿದಾಯ ಹೇಳುತ್ತೇವೆ ಎಂದು ಎಲಾನ್‌ ಮಸ್ಕ್‌ ಟ್ವೀಟ್‌ ಮಾಡಿದ್ದಾರೆ. ಪ್ರಸ್ತುತ ಟ್ವಿಟರ್‌ನ ಲೋಗೋ ಪಕ್ಷಿ ಆಗಿದ್ದು ಸದ್ಯದಲ್ಲೇ ಇದು ಬದಲಾವಣೆ ಆಗಲಿದೆ.

ಇದರ ಜೊತೆಗೆ ತನ್ನ ‘ಎಕ್ಸ್’ ಆ್ಯಪ್ ಬಗ್ಗೆಯೂ ಟ್ವೀಟ್ ಮಾಡಿರುವ ಮಸ್ಕ್, ನಾಳೆಯೇ ನಾವು ಜಗತ್ತಿನಾದ್ಯಂತ ಲೈವ್ ಹೋಗಲಿದ್ದೇವೆ ಎಂದು ಘೋಷಿಸಿದ್ದಾರೆ. ಈ ಆ್ಯಪ್ ಸಾಕಷ್ಟು ವಿಶೇಷವಾಗಿದ್ದು, ಜನರು ತಮ್ಮ ಅನಿಸಿಕೆಗಳನ್ನು ವಿಶ್ವದ ಮುಂದೆ ತೆರೆದಿಟ್ಟುಕೊಳ್ಳಲು ಇರುವ ಒಂದು ಅತ್ಯುತ್ತಮ ವೇದಿಕೆ ಆಗಿದೆ ಎಂದು ಅವರು ಹೇಳಿಕೊಂಡಿದ್ದಾರೆ.

ಸಾಮಾನ್ಯವಾಗಿ ಎಲಾನ್ ಮಸ್ಕ್ ಅವರ ಪೋಸ್ಟ್​ಗೆ ಟ್ವಿಟ್ಟರ್ ಬಳಕೆದಾರರಿಂದ ಮಿಶ್ರ ಪ್ರತಿಕ್ರಿಯೆಗಳು ಬರುತ್ತದೆ. ಅದು ಈ ಬಾರಿ ಕೂಡ ಮುಂದುವರೆದಿದೆ, ಕೆಲವರು ಮುಂಬರುವ ಬದಲಾವಣೆಯ ಬಗ್ಗೆ ತಮ್ಮ ಉತ್ಸಾಹವನ್ನು ವ್ಯಕ್ತಪಡಿಸಿದರೆ, ಇನ್ನು ಕೆಲವರು ಈ ತಪ್ಪನ್ನು ಮಾಡದಂತೆ ಎಚ್ಚರಿಕೆ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!