ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಇಒ ಮತ್ತು ಬಿಲಿಯನೇರ್ ಎಲಾನ್ ಮಸ್ಕ್ ಅವರು ಸಾಮಾಜಿಕ ನೆಟ್‌ವರ್ಕ್ ಎಕ್ಸ್‌ನಲ್ಲಿ ಹೆಚ್ಚು ಅನುಯಾಯಿಗಳನ್ನು ಹೊಂದಿರುವ ವಿಶ್ವದ ನಾಯಕ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸಿದ್ದಾರೆ.
ಅತಿ ಹೆಚ್ಚು ಹಿಂಬಾಲಕರನ್ನು ಹೊಂದಿರುವ ವಿಶ್ವ ನಾಯಕ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸುತ್ತೇನೆ ಎಂದು ಮಸ್ಕ್ ತಮ್ಮ ಎಕ್ಸ್ ಖಾತೆಯಲ್ಲಿ ಬರೆದಿದ್ದಾರೆ.
ಕೆಲವು ದಿನಗಳ ಹಿಂದೆ, X ಖಾತೆಯಲ್ಲಿ ಮೋದಿಯ ಅನುಯಾಯಿಗಳ ಸಂಖ್ಯೆ 100 ಮಿಲಿಯನ್ (10 ಕೋಟಿ) ತಲುಪಿತು. X ನಲ್ಲಿ ಅತಿ ಹೆಚ್ಚು ಅನುಯಾಯಿಗಳನ್ನು ಹೊಂದಿರುವ ವಿಶ್ವ ನಾಯಕರ ಪಟ್ಟಿಯಲ್ಲಿ ಯುಎಸ್ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಅಗ್ರಸ್ಥಾನದಲ್ಲಿದ್ದಾರೆ. ಒಬಾಮಾ 131 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ.