ಪ್ರಧಾನಿ ಮೋದಿ ಕುರಿತು ಎಲಾನ್ ಮಸ್ಕ್ ಮೆಚ್ಚುಗೆ: ಇದು ಭಾರತವೇನು ಎಂಬುದನ್ನು ವಿವರಿಸುತ್ತದೆ ಎಂದ ಠಾಕೂರ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಇಂದು ಅಮೆರಿಕದಲ್ಲಿ ಟೆಸ್ಲಾ ಮತ್ತು ಸ್ಪೇಸ್ಎಕ್ಸ್ ಸಿಇಒ ಎಲಾನ್ ಮಸ್ಕ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಮಾಡಿದ್ದು, ಕು ಕುರಿತು ಕೇಂದ್ರ ಸಚಿವ ಅನುರಾಗ್ ಠಾಕೂರ್ ಮಾತನಾಡಿದ್ದಾರೆ.

ಎಲಾನ್ ಮಸ್ಕ್ ಭಾರತದ ವ್ಯಾಪಾರ ಸಾಮರ್ಥ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವುದು ಭಾರತವೇನು ಎಂಬುದನ್ನು ವಿವರಿಸುತ್ತದೆ ಎಂದು ಹೇಳಿದ್ದಾರೆ.

ಎಲಾನ್ ಮಸ್ಕ್ ಅವರ ಹೇಳಿಕೆ ಭಾರತದ ನಾಯಕತ್ವ ಮತ್ತು ಪ್ರಧಾನಿ ಮೋದಿಯವರ ಬಗ್ಗೆ ಬಹಳಷ್ಟನ್ನು ವಿವರಿಸುತ್ತದೆ. ವಿಶ್ವದಾದ್ಯಂತ ದೊಡ್ಡ ವ್ಯಕ್ತಿಗಳು ಕೂಡ ಈಗ ಪ್ರಧಾನಿ ಮೋದಿಯನ್ನು ಹೊಗಳುತ್ತಿದ್ದಾರೆಂದು ಹೇಳಿದರು.

ನ್ಯೂಯಾರ್ಕ್ ನಲ್ಲಿ ಪ್ರಧಾನಿ ಮೋದಿಯವರನ್ನು ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ್ದ ಎಲಾನ್ ಮಸ್ಕ್ ಅವರು, ಮೋದಿಯವರೊಂದಿಗಿನ ಈ ಭೇಟಿ ನನಗೆ ರೋಮಾಂಚನಕಾರಿ ಅನುಭವ ನೀಡಿದೆ. ಅವರು ಕೆಲವು ವರ್ಷಗಳ ಹಿಂದೆ ನಮ್ಮ ಕಾರ್ಖಾನೆಗೆ ಭೇಟಿ ನೀಡಿದ್ದರು.ಇದರಿಂದಾಗಿ ಅವರ ಬಗ್ಗೆ ನನಗೆ ತಿಳಿದಿತ್ತು. ಅವರು ನನಗೆ ಭಾರತಕ್ಕೆ ಆಮಂತ್ರಣ ನೀಡಿದ್ದಾರೆ. ಶೀಘ್ರದಲ್ಲೇ ನಾನು ಭಾರತಕ್ಕೆ ಭೇಟಿ ನೀಡಲಿದ್ದೇನೆ. ಮೋದಿಯವರು ನಿಜವಾಗಿಯೂ ಭಾರತದ ಬಗ್ಗೆ ಬಹಳಷ್ಟು ಕಾಳಜಿ ವಹಿಸುತ್ತಾರೆ ಎಂದಿದ್ದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!