ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಲೆ ಮಹದೇಶ್ವರ ಬೆಟ್ಟ ಇನ್ಮುಂದೆ ಪಾನ ಮುಕ್ತ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಇಂದು ಶ್ರೀ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ನಡೆಸಿ ಮಹತ್ವದ ವಿಚಾರಗಳ ಬಗ್ಗೆ ಕ್ರಮ ಕೈಗೊಂಡಿದ್ದಾರೆ.
ಇಲ್ಲಿಯವರೆಗೂ ಬೆಟ್ಟದಲ್ಲಿ, ಪ್ರಾಧಿಕಾರದ ವ್ಯಾಪ್ತಿಯಲ್ಲಿ ಮಾರಾಟ ಮುಕ್ತ ಇತ್ತು. ಇನ್ನು ಮುಂದೆ ಹೊರಗಿನಿಂದ ತರುವುದಕ್ಕೂ ಬ್ರೇಕ್ ಹಾಕಬೇಕು ಎಂದು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಮತ್ತು ಪ್ರಾಧಿಕಾರದ ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ.
ಅಲ್ಲದೇ ಪ್ರಾಧಿಕಾರದ ಕೆಲಸ ಕಾರ್ಯಗಳು, ಕಾಮಗಾರಿಗಳು ಸೂಕ್ತವಾಗಿ, ವೇಗವಾಗಿ ನಡೆಯಲು ಒಬ್ಬ ಎಇಇಯನ್ನು ಪ್ರಾಧಿಕಾರಕ್ಕೇ ನೇಮಿಸಲು ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಸತ್ಯನಾರಾಯಣ್ ಗೆ ಸಿಎಂ ಸೂಚಿಸಿದ್ದಾರೆ.