ದಿಲ್ಲಿ ವಿಮಾನ ನಿಲ್ದಾಣಕ್ಕೆ ಇ-ಮೇಲ್‌ ಬೆದರಿಕೆ: 13 ವರ್ಷದ ಬಾಲಕ ಅರೆಸ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: 

ದಿಲ್ಲಿ ವಿಮಾನ ನಿಲ್ದಾಣಕ್ಕೆ ಬೆದರಿಕೆಯೊಡ್ಡಿದ್ದ ಬಾಲಕನನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. 13 ವರ್ಷದ ಬಾಲಕನೋರ್ವ ದಿಲ್ಲಿ ವಿಮಾನ ನಿಲ್ದಾಣಕ್ಕೆ ಇ-ಮೇಲ್‌ ಮೂಲಕ ಹುಸಿಬಾಂಬ್‌ ಕರೆ ಮಾಡಿದ್ದ ಎನ್ನಲಾಗಿದೆ.

ಡೆಪ್ಯೂಟಿ ಪೊಲೀಸ್‌ ಕಮಿಷನರ್‌ ಉಷಾ ರಂಗ್ನಾನಿ ಮಾಹಿತಿ ನೀಡಿದ್ದು, ದುಬೈನಿಂದ ಬಂದಿದ್ದ ವಿಮಾನದಲ್ಲಿ ಬಾಂಬ್‌ ಇಟ್ಟಿರೋದಾಗಿ ಬಾಲಕ ಕೆಲವು ದಿನಗಳ ಹಿಂದೆ ಇ-ಮೇಲ್‌ ಕಳುಹಿಸಿದ್ದ. ತನಿಖೆ ನಡೆಸಿದ ಪೊಲೀಸರು ಬಾಲಕನನ್ನು ವಶಕ್ಕೆ ಪಡೆದಿದ್ದಾರೆ. ವಿಚಾರಣೆ ವೇಳೆ ತಮಾಷೆಗಾಗಿ ಮೇಲ್‌ ಕಳುಹಿಸಿದಾಗ ಹೇಳಿದ್ದಾನೆ. ಇಮೇಲ್‌ ಕಳುಹಿಸಿದ ಕೆಲವೇ ಗಂಟೆಗಳಲ್ಲಿ ಅದನ್ನು ಡಿಲೀಟ್‌ ಮಾಡಿದ್ದಾನೆ ಎಂದು ತಿಳಿಸಿದ್ದಾರೆ.

ದೇಶದಲ್ಲಿ ಇತ್ತೀಚೆಗೆ ಪ್ರಮುಖ ನಗರಗಳಲ್ಲಿ ಬಾಂಬ್‌ ದಾಳಿಗಳ ಬೆದರಿಕೆಗಳು ಜಾಸ್ತಿಯಾಗಿವೆ. ಬೆಂಗಳೂರಿನ ಶಾಲೆಗಳು ಸೇರಿ ಮುಂಬೈ, ದೆಹಲಿ ಏರ್‌ಪೋರ್ಟ್‌ಗಳು, ಸರ್ಕಾರದ ಕಟ್ಟಡಗಳಿಗೆ ಹುಸಿ ಬೆದರಿಕೆ ಕರೆಗಳು, ಇ-ಮೇಲ್‌ಗಳು ರವಾನೆಯಾಗುತ್ತಲೇ ಇವೆ. ಇದರ ಬೆನ್ನಲ್ಲೇ, ಮಂಗಳವಾರ (ಜೂನ್‌ 18) ಮುಂಬೈನಲ್ಲಿರುವ 50ಕ್ಕೂ ಅಧಿಕ ಆಸ್ಪತ್ರೆಗಳನ್ನು ಸ್ಫೋಟಿಸುವುದಾಗಿ ಇ-ಮೇಲ್‌ ಮೂಲಕ ಬಾಂಬ್‌ ಬೆದರಿಕೆ ಹಾಕಲಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!