ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಪೊಲೀಸ್ ಇಲಾಖೆಯ ಘನತೆಗೆ ಮಸಿ ಬಳಿಯುವಂತಹ ಘಟನೆಯೊಂದು ರಾಜಧಾನಿಯಲ್ಲಿ ನಡೆದಿದೆ. ರಕ್ಷಣೆ ನೀಡಬೇಕಾದ ಪೊಲೀಸನೇ ಅಬಲೆಗೆ ಕಿರುಕುಳ ನೀಡಿ ಪೋಕ್ಸೋ ಕಾಯ್ದೆಯಡಿ ಕಂಬಿ ಎಣಿಸುವಂತಾಗಿದೆ.
ಬೆಂಗಳೂರಿನ ಆರ್.ಟಿ.ನಗರ ಠಾಣೆಯ ಕಾನ್ಸ್‌ಟೇಬಲ್ ಯಮುನಾ ನಾಯಕ್ ಎಂಬಾತ ಫ್ರೀಡಂ ಪಾರ್ಕ್‌ನಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಂದರ್ಭದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಸಂತ್ರಸ್ತ ವಿದ್ಯಾರ್ಥಿನಿ ನೀಡಿದ ದೂರಿನ ಮೇರೆಗೆ ಉಪ್ಪಾರಪೇಟೆ ಪೊಲೀಸರು ತ್ವರಿತವಾಗಿ ಕಾರ್ಯಪ್ರವೃತ್ತರಾಗಿ, ಆರೋಪಿ ಪೇದೆಯನ್ನು ಬಂಧಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಪೊಲೀಸರೇ ಕೊಲೆ, ಸುಲಿಗೆ, ಲಂಚ ಮತ್ತು ಲೈಂಗಿಕ ದೌರ್ಜನ್ಯದಂತಹ ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗುತ್ತಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಅಪರಾಧಿಗಳನ್ನು ಪತ್ತೆ ಹಚ್ಚಿ ನ್ಯಾಯಾಲಯಕ್ಕೆ ತಳ್ಳಬೇಕಾದವರೇ ಇಂದು ಆರೋಪಿಗಳ ಸ್ಥಾನದಲ್ಲಿ ನಿಂತಿರುವುದು ದುರದೃಷ್ಟಕರ.



