Friday, November 14, 2025

ರಾಜ್ಯದ ಎಲ್ಲಾ ಬಸ್‌ಗಳಲ್ಲಿ ತುರ್ತು ನಿರ್ಗಮನ ದ್ವಾರ ಕಡ್ಡಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದ ಎಲ್ಲಾ ಬಸ್‌ಗಳಲ್ಲಿ ತುರ್ತು ನಿರ್ಗಮನ ದ್ವಾರಗಳ ಅಳವಡಿಕೆ ಕಡ್ಡಾಯ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಯವರು ಹೇಳಿದ್ದಾರೆ.

ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ನಡೆದ ಪರಿಶೀಲನಾ ಸಭೆಯಲ್ಲಿ ಸಚಿವರು ಈ ನಿರ್ದೇಶನ ನೀಡಿದ್ದಾರೆಂದು ತಿಳಿದುಬಂದಿದೆ.

ಸಭೆಯಲ್ಲಿ ಇತ್ತೀಚಿನ ಬಸ್ ಅಪಘಾತಗಳನ್ನು ಉಲ್ಲೇಖಿಸಿದ ಸಚಿವರು, ಕರ್ನಾಟಕದ ಎಲ್ಲಾ ಬಸ್‌ಗಳು ನೋಂದಣಿ ಅಥವಾ ಫಿಟ್‌ನೆಸ್ ಪ್ರಮಾಣಪತ್ರಗಳನ್ನು ನವೀಕರಿಸುವ ಮೊದಲು ತುರ್ತು ನಿರ್ಗಮನ ದ್ವಾರಗಳನ್ನು ಹೊಂದಿರಬೇಕು. ನಿಯಮ ಪಾಲನೆಯನ್ನು ಖಚಿತಪಡಿಸಿಕೊಳ್ಳಲು ಶೀಘ್ರದಲ್ಲೇ ಸುತ್ತೋಲೆ ಹೊರಡಿಸಲಾಗುವುದು ಎಂದು ಹೇಳಿದರು.

ಇದೇ ವೇಳೆ ನಿಯಮವನ್ನು ಜಾರಿಗೊಳಿಸಲು ವಿಫಲರಾದ ಅಧಿಕಾರಿಗಳ ವಿರುದ್ಧ ಕಠಿಣ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದೂ ಎಚ್ಚರಿಕೆ ನೀಡಿದರು.

error: Content is protected !!