CINE | ಭಾರೀ ಕುತೂಹಲ ಮೂಡಿಸಿದ ‘ಎಮರ್ಜೆನ್ಸಿ’ ರಿಲೀಸ್ ಡೇಟ್ ಅನೌನ್ಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಟಿ ಕಂಗನಾ ರಣಾವತ್ ಅಭಿನಯದ ಎಮರ್ಜೆನ್ಸಿ ಸಿನಿಮಾ ರಿಲೀಸ್ ಡೇಟ್ ಅನೌನ್ಸ್ ಆಗಿದೆ.

ಈಗಾಗಲೇ ಸಿನಿಮಾ ಬಗ್ಗೆ ಸಾಕಷ್ಟು ಹೈಪ್ ಕ್ರಿಯೇಟ್ ಆಗಿದ್ದು, ಸಿನಿಮಾ ನೋಡೋದಕ್ಕೂ ಇನ್ನೂ ಕೆಲ ತಿಂಗಳು ಕಾಯಲೇಬೇಕಿದೆ.

ಕಳೆದ ವರ್ಷವೇ ನಮ್ಮ ಸಿನಿಮಾ ರಿಲೀಸ್ ಆಗಬೇಕಿತ್ತು, ಕೆಲ ಕಾರಣಗಳಿಂದ ಅದು ಆಗಲಿಲ್ಲ. ಇದೇ ಜೂನ್ 14ರಂದು ನಮ್ಮ ಸಿನಿಮಾ ನಿಮ್ಮೆದುರು ಇಡುತ್ತಿದ್ದೇವೆ ಎಂದು ಕಂಗನಾ ಹೇಳಿದ್ದಾರೆ.

ಇಂದಿರಾ ಗಾಂಧಿ ಪಾತ್ರದಲ್ಲಿ ಕಂಗನಾ ಹೇಗೆ ಕಾಣಿಸಲಿದ್ದಾರೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮೂಡಿದ್ದು, ಸಿನಿಮಾ ಬಿಡುಗಡೆಗೆ ಕಾಯ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!