ಎಮರ್ಜಿಂಗ್​ ಏಷ್ಯಾಕಪ್ ವೇಳಾಪಟ್ಟಿ ಪ್ರಕಟ : ಇಂಡಿಯಾ VS ಪಾಕ್‌ ಮ್ಯಾಚ್‌ ಯಾವಾಗ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಉದಯೋನ್ಮುಖ ತಂಡಗಳ  ಏಷ್ಯಾಕಪ್ ಟಿ20 ಟೂರ್ನಿಯ ವೇಳಾಪಟ್ಟಿ ಪ್ರಕಟವಾಗಿದೆ. ಒಮಾನ್​ನಲ್ಲಿ ನಡೆಯಲಿರುವ ಈ ಟೂರ್ನಿಯು ಅಕ್ಟೋಬರ್ 18 ರಿಂದ ಶುರುವಾಗಲಿದ್ದು, ಫೈನಲ್ ಪಂದ್ಯವು ಅಕ್ಟೋಬರ್ 27 ರಂದು ನಡೆಯಲಿದೆ. ಇನ್ನು ಈ ಬಾರಿಯ ಟೂರ್ನಿಯಲ್ಲಿ ಒಟ್ಟು 8 ತಂಡಗಳು ಭಾಗವಹಿಸಲಿವೆ. ಈ ಎಂಟು ತಂಡಗಳನ್ನು ಎರಡು ಗ್ರೂಪ್​ಗಳಲ್ಲಿ ವಿಂಗಡಿಸಲಾಗಿದ್ದು, ಅದರಂತೆ ಮೊದಲ ಸುತ್ತಿನಲ್ಲಿ ಗುಂಪುಗಳಲ್ಲಿನ ತಂಡಗಳ ನಡುವೆ ಪೈಪೋಟಿ ನಡೆಯಲಿದೆ.

ಎಮರ್ಜಿಂಗ್ ಏಷ್ಯಾಕಪ್ ಟೂರ್ನಿಯ ಗ್ರೂಪ್ ಬಿ ನಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಕಾಣಿಸಿಕೊಂಡಿವೆ. ಹೀಗಾಗಿ ಮೊದಲ ಸುತ್ತಿನಲ್ಲೇ ಸಾಂಪ್ರದಾಯಿಕ ಎದುರಾಳಿಗಳು ಮುಖಾಮುಖಿಯಾಗಲಿದ್ದಾರೆ. ಅದರಂತೆ ಅಕ್ಟೋಬರ್ 19 ರಂದು ನಡೆಯಲಿರುವ 4ನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಎದುರು ಬದುರಾಗಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!