ಹೊಸದಿಗಂತ ಡಿಜಿಟಲ್ ಡೆಸ್ಕ್:
ಶ್ರೀಲಂಕಾದಲ್ಲಿ ನಡೆಯುತ್ತಿಯುವ ಎಮರ್ಜಿಂಗ್ ಏಷ್ಯಾಕಪ್ ನಲ್ಲಿ ಟೀಮ್ ಇಂಡಿಯಾ ಎ ನೇಪಾಳ ಎ ವಿರುದ್ಧ ಭರ್ಜರಿ ಜಯ ಸಾಧಿಸಿದೆ.
ಟಾಸ್ ಗೆದ್ದ ನೇಪಾಳ ಎ ತಂಡವು ಮೊದಲು ಬ್ಯಾಟಿಂಗ್ ಮಾಡಿತು. ಆದರೆ 39.2 ಓವರ್ಗಳಲ್ಲಿ 167 ರನ್ಗಳಿಗೆ ಆಲೌಟ್ ಆಯಿತು.
168 ರನ್ಗಳ ಸುಲಭ ಗುರಿ ಬೆನ್ನತ್ತಿದ ಟೀಮ್ ಇಂಡಿಯಾಗೆ ಆರಂಭಿಕರಾದ ಅಭಿಷೇಕ್ ಶರ್ಮಾ ಹಾಗೂ ಸಾಯಿ ಸುದರ್ಶನ್ ಅತ್ಯುತ್ತಮ ಆರಂಭ ಒದಗಿಸಿದ್ದರು. 19 ಓವರ್ಗಳಲ್ಲಿ 139 ರನ್ಗಳ ಜೊತೆಯಾಟವಾಡಿದ ಈ ಜೋಡಿ ಭಾರತದ ಗೆಲುವನ್ನು ಖಚಿತಪಡಿಸಿದರು.
ಅಭಿಷೇಕ್ ಶರ್ಮಾ 87 ರನ್ ಕಲೆಹಾಕಿದ್ದರು.ಇನ್ನು ಸಾಯಿ ಸುದರ್ಶನ್ 52 ಎಸೆತಗಳಲ್ಲಿ ಅಜೇಯ 58 ರನ್ ಬಾರಿಸಿದರೆ, ವಿಕೆಟ್ ಕೀಪರ್ ಬ್ಯಾಟರ್ ಧ್ರುವ್ ಜುರೆಲ್ 21 ರನ್ ಕಲೆಹಾಕಿದರು. ಈ ಮೂಲಕ 22.1 ಓವರ್ಗಳಲ್ಲಿ 1 ವಿಕೆಟ್ ನಷ್ಟಕ್ಕೆ 172 ರನ್ ಬಾರಿಸಿ ಟೀಮ್ ಇಂಡಿಯಾ 9 ವಿಕೆಟ್ಗಳ ಭರ್ಜರಿ ಜಯ ಸಾಧಿಸಿತು.