January18, 2026
Sunday, January 18, 2026
spot_img

ಚಕ್ರವರ್ತಿ ಸೂಲಿಬೆಲೆಗೆ ಪಿತೃವಿಯೋಗ: ರಾಜಕೀಯ ಗಣ್ಯರಿಂದ ಸಂತಾಪ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಖ್ಯಾತ ವಾಗ್ಮಿ, ಚಿಂತಕ, ಅಂಕಣಕಾರ ಮತ್ತು ಯುವ ಬ್ರಿಗೇಡ್ ಸಂಸ್ಥಾಪಕರಾದ ಚಕ್ರವರ್ತಿ ಸೂಲಿಬೆಲೆ ಅವರಿಗೆ ಪಿತೃವಿಯೋಗ ಸಂಭವಿಸಿದೆ. ಅವರ ತಂದೆ ದೇವದಾಸ್ ಸುಬ್ರಾಯ ಶೇಟ್ ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಸೂಲಿಬೆಲೆ ಅವರ ತಂದೆ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿ, ಅನೇಕ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದರು.

ಈ ದುಃಖಕರ ಸುದ್ದಿಯ ಬಳಿಕ ರಾಜಕೀಯ ಹಾಗೂ ಸಾಮಾಜಿಕ ವಲಯದಿಂದ ಹಲವು ಗಣ್ಯ ವ್ಯಕ್ತಿಗಳು ಸಂತಾಪ ಸೂಚಿಸಿದ್ದಾರೆ. ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಎಕ್ಸ್ (ಹಿಂದಿನ ಟ್ವಿಟ್ಟರ್) ನಲ್ಲಿ ಬರೆಯುತ್ತಾ, “ಆತ್ಮೀಯರಾದ ಶ್ರೀ ಚಕ್ರವರ್ತಿ ಸೂಲಿಬೆಲೆ ಅವರ ತಂದೆಯವರು ನಿಧನರಾದ ಸುದ್ದಿ ತಿಳಿದು ವಿಷಾದವಾಯಿತು. ಮೃತರ ಆತ್ಮಕ್ಕೆ ಶಾಂತಿ ದೊರಕಲೆಂದು ಹಾಗೂ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲೆಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ” ಎಂದು ಸಂತಾಪ ಸೂಚಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕೂಡ ಸಂತಾಪ ಸೂಚಿಸುತ್ತಾ, “ರಾಷ್ಟ್ರವಾದಿ ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರ ತಂದೆಯವರ ಅಗಲಿಕೆ ತುಂಬಾ ದುಃಖಕರ. ಕುಟುಂಬ ವರ್ಗಕ್ಕೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಮೃತರ ಆತ್ಮಕ್ಕೆ ಚಿರಶಾಂತಿ ದೊರೆಯಲಿ” ಎಂದು ಹೇಳಿದ್ದಾರೆ.

ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಕೂಡ ತಮ್ಮ ಸಂತಾಪ ಸೂಚನೆ ಹಂಚಿಕೊಂಡು, “ಸಮಾಜಕ್ಕೆ ರಾಷ್ಟ್ರ, ಧರ್ಮಕ್ಕಾಗಿ ಜೀವನವನ್ನು ಮುಡಿಪಾಗಿಟ್ಟ ಪುತ್ರನನ್ನು ನೀಡಿದ ತೀರ್ಥರೂಪರಾದ ದೇವದಾಸ್ ಶೇಟ್ ಅವರ ಆತ್ಮಕ್ಕೆ ಸದ್ಗತಿ ಕೋರುತ್ತೇನೆ. ಕುಟುಂಬ, ಬಂಧುಗಳು ಹಾಗೂ ಶಿಷ್ಯವರ್ಗಕ್ಕೆ ಭಗವಂತನು ಧೈರ್ಯ ನೀಡಲಿ” ಎಂದು ಬರೆದಿದ್ದಾರೆ.

Must Read

error: Content is protected !!