ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದಿನ ಬಜೆಟ್ನಲ್ಲಿ ಉನ್ನತ ಶಿಕ್ಷಣಕ್ಕೆ ಹೆಚ್ಚಿನ ಅನುದಾನ ನೀಡುವುದಾಗಿ ಹೇಳಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಹೇಳಿದ್ದಾರೆ.
ಈ ಹಿಂದಿನ ಸರ್ಕಾರಗಳು ಉನ್ನತ ಶಿಕ್ಷಣಕ್ಕೆ ಅಲ್ಪಸ್ವಲ್ಪ ಅನುದಾನ ಮಾತ್ರ ಮೀಸಲಿಟ್ಟಿದ್ದರು. ಇದರಿಂದ ಬೇಸರವಾಗಿತ್ತು. ಆದರೆ ಸಿಎಂ ಸಿದ್ದರಾಮಯ್ಯ ಅನುದಾನ ಹೆಚ್ಚಳದ ಭರವಸೆ ನೀಡಿದ್ದಾರೆ ಎಂದಿದ್ದಾರೆ.
ಉತ್ತಮ ಉದ್ಯೋಗಾವಕಾಶಕ್ಕಾಗಿ ಕರ್ನಾಟಕದ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಸುಧಾರಣೆ ಮುಖ್ಯವಾಗಿದೆ. ಇದರಿಂದಾಗಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲಿಷ್ ಕಲಿಸಲಾಗುತ್ತದೆ. ಅಷ್ಟೇ ಅಲ್ಲದೆ ಮೂರು ವರ್ಷಗಳಲ್ಲಿ ಮೂರು ಸಾವಿರ ಕರ್ನಾಟಕ ಪಬ್ಲಿಕ್ ಸ್ಕೂಲ್ಗಳನ್ನು ತೆರೆಯಲು ಸರ್ಕಾರ ನಿರ್ಧಾರ ಮಾಡಿದೆ ಎಂದಿದ್ದಾರೆ.