ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಸಕ್ತ ಸಾಲಿನ ಸಂಪೂರ್ಣ ಬಜೆಟ್ ಮಂಡನೆ ಆರಂಭವಾಗಿದ್ದು, ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಮಾಡುತ್ತಿದ್ದಾರೆ.
ಈ ಬಾರಿಯ ಬಜೆಟ್‌ನಲ್ಲಿ ಮೇಕ್ ಇನ್ ಇಂಡಿಯಾ ಬ್ರ್ಯಾಂಡ್ ಆಟಿಕೆಗಳ ತಯಾರಿಕೆಗೆ ಒತ್ತು ನೀಡಲಾಗಿದೆ. ಆಟಿಕೆಗಳ ವಲಯಕ್ಕಾಗಿ, ಭಾರತವನ್ನು ಜಾಗತಿಕ ಉತ್ಪಾದನಾ ಕೇಂದ್ರವನ್ನಾಗಿ ಮಾಡಲು ಸರ್ಕಾರವು ಯೋಜನೆಯನ್ನು ಜಾರಿಗೊಳಿಸುತ್ತದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.