ಕಂದಕಕ್ಕೆ ಬಿದ್ದ ಗಜರಾಜನ ರಕ್ಷಣೆ, ವಿಡಿಯೋ ವೈರಲ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಜಾರ್ಖಂಡ್‌ನ ರಾಮಗಢ ಜಿಲ್ಲೆಯ ಹುಲು ಗ್ರಾಮದಲ್ಲಿ ಕಂದಕಕ್ಕೆ ಬಿದ್ದ ಆನೆಯನ್ನು ರಕ್ಷಣೆ ಮಾಡಲಾಗಿದೆ. ‌ಈ ಭಾಗದಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿದ್ದಿ, ಆಹಾರ ಅರಸಿ ನಾಡಿಗೆ ಬಂದ ದೈತ್ಯ ಸಲಗ ಕತ್ತಲೆಯಲ್ಲಿ ಕಾಣದೆ ಕಂದಕಕ್ಕೆ ಬಿದ್ದಿದೆ. ಕೂಡಲೇ ವಿಚಾರವನ್ನು ಗ್ರಾಮಸ್ಥರು ಅರಣ್ಯ ಅಧಿಕಾರಿಗಳಿಗೆ ಮಾಹಿತಿ ತಿಳಿಸಿದ್ದಾರೆ.

ಸ್ಥಳಕ್ಕಾಗಮಿಸಿದ ಅರಣ್ಯಾಧಿಕಾರಿಗಳು ಜೆಸಿಬಿ ಯಂತ್ರದ ಸಹಾಯದಿಂದ ಆನೆಯನ್ನು ರಕ್ಷಣೆ ಮಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ನಂತರ ಅರಣ್ಯ ಇಲಾಖೆ ಹಾಗೂ ಗ್ರಾಮಸ್ಥರು ಬೆಂಕಿ ಹಚ್ಚಿ, ಪಟಾಕಿ ಸಿಡಿಸುತ್ತಾ ಆನೆಯನ್ನು ಕಾಡಿನತ್ತ ಓಡಿಸಿದರು.

ಜಾರ್ಖಂಡ್‌ನ ರಾಮಗಢ ಜಿಲ್ಲೆಯ ಗೋಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳೆದ ಕೆಲವು ದಿನಗಳಿಂದ ಕಾಡಾನೆಗಳು ಅಟ್ಟಹಾಸ ಸೃಷ್ಟಿಸಿವೆ. ಈ ಪ್ರದೇಶದಲ್ಲಿ ಆನೆಗಳ ಹಿಂಡು ಎಲ್ಲೆಂದರಲ್ಲಿ ಅಡ್ಡಾಡುತ್ತಿವೆ. ಪ್ರಾಣಹಾನಿ, ಆಸ್ತಿ-ಪಾಸ್ತಿ ನಷ್ಟದಿಂದ ಜನ ಭಯಭೀತರಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!