ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೆಲಸದಿಂದ ತೆಗೆದು ಹಾಕಿದ್ದಕ್ಕೆ ಉದ್ಯೋಗಿಗಳು ಕಂಪನಿಗೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಶಾಕಿಂಗ್ ಘಟನೆ ಬೆಂಗಳೂರು ನಗರದಲ್ಲಿ ನಡೆದಿದೆ.
ಸೆಪ್ಟೆಂಬರ್ 27 ರಂದು ಬೆಳಗ್ಗೆ 10.30ಕ್ಕೆ ಪೃಥ್ವಿ ಪಾರ್ಕ್ ಸ್ಕ್ವೇರ್ ರಿಯಲ್ ಎಸ್ಟೇಟ್ ಕಂಪನಿಗೆ ಬೆಂಕಿ ಹಚ್ಚಿದ್ದು, ಘಟನೆಯು ತಡವಾಗಿ ಬೆಳಕಿಗೆ ಬಂದಿದೆ.
ಪೃಥ್ವಿ ಪಾರ್ಕ್ ಸ್ಕ್ವೇರ್ ರಿಯಲ್ ಎಸ್ಟೇಟ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ರಾಹುಲ್ ಪೂಜಾರಿ, ಲ್ಯಾವ್ಸನ್ ಪೀಟರ್ ಜಾನ್ ಎಂಬ ಇಬ್ಬರು ಕೆಲಸದಿಂದ ವಜಾಗೊಂಡಿದ್ದವರು.
ಇವರ ಈ ಕೃತ್ಯದಿಂದ ಕಂಪನಿಯ 11 ಲಕ್ಷ ರೂ. ಮೌಲ್ಯದ ಪೀಠೋಪಕರಣಗಳು ಬೆಂಕಿಗೆ ಆಹುತಿಯಾಗಿವೆ ಎಂದು ತಿಳಿದುಬಂದಿದೆ.